ಮುಖ್ಯಮಂತ್ರಿಗಳ ಮಾದ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ನೇಮಕ
ಬೆಂಗಳೂರು: ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರಕಾರ ಆದೇಶ ಹೊರಡಿಸಿದೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದವರಾಗಿರುವ ಗುರುಲಿಂಗಸ್ವಾಮಿ ಹೊಳಿಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಕನ್ನಡದ ರಾಜ್ಯ ಮಟ್ಟದ ದಿನಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿಯೂ 1998 ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಹಿರಿಯ ಪತ್ರಕರ್ತರಾಗಿದ್ದಾರೆ. ಇದಕ್ಕೂ ಮುಂಚೆ ಗುರುಲಿಂಗಸ್ವಾಮಿ […]
ಕೊರೊನಾ ಸಂದರ್ಭದಲ್ಲಿ ಮಾನವೀಯತೆ ಮೆರೆದ ಆಸ್ಪತ್ರೆ ಕಾರ್ಯಕ್ಕೆ ಮೆಚ್ಚುಗೆ- ಅಂಗವಿಲಕರ ಸಂಸ್ಥೆಯಿಂದ ವೈದ್ಯಕೀಯ ಸಲಕರಣೆಗಳ ಕೊಡುಗೆ
ವಿಜಯಪುರ: ಇದು ಕೊರೊನಾ ಸಂದರ್ಭದಲ್ಲಿ ಫಲಾಪೇಕ್ಷೆಯಿಲ್ಲದೇ ಜನಸೇವೆಗೆ ಪ್ರಾಧಾನ್ಯತೆ ನೀಡಿ ಸರಕಾರ ನಿಗದಿ ಪಡಿಸಿದ್ದಕ್ಕಿಂತ ಕಡಿಮೆ ಬೆಲೆ ಚಿಕಿತ್ಸೆ ನೀಡಿದ ಆಸ್ಪತ್ರೆಯ ಕಾರ್ಯಕ್ಕೆ ಅಂಗವಿಕಲರ ಸಂಸ್ಥೆಯೊಂದು ನೀಡಿದ ಸ್ಪೂರ್ತಿಯ ಕೊಡುಗೆ. ಫಲಾವೇಕ್ಷೆಯಿಲ್ಲದ ಕೆಲಸವನ್ನು ದೇವರು ಕೂಡ ಮೆಚ್ಚುತ್ತಾನೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಕೊರೊನಾ ಸಂದರ್ಭದಲ್ಲಿ ವಿಜಯಪುರದ ಪ್ರತಿಷ್ಛಿತ ಬಿ ಎಲ್ ಡಿ ಇ ಆಸ್ಪತ್ರೆ ಸರಕಾರ ನಿಗದಿ ಪಡಿಸಿದ್ದಕ್ಕಿಂತ ಕಡಿಮೆ ಬೆಲೆಯಲ್ಲಿ ಚಿಕಿತ್ಸೆ ನೀಡುವ ಮೂಲಕ ರಾಜ್ಯಾದ್ಯಂತ ಮನೆಮಾತಾಗಿದ್ದಷ್ಟೇ ಅಲ್ಲ, ದೇಶಾದ್ಯಂತ ಇತರ ಖಾಸಗಿ ಆಸ್ಪತ್ರೆಗಳಿಗೆ […]
ದ್ವಿತೀಯ ಪಿಯು ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ
ವಿಜಯಪುರ: ಸ. 3ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷೆ ಕೇಂದ್ರಗಳ ವರೆಗೆ ತೆರಳಲು ಮತ್ತು ಹಿಂದಿರುಗಲು ಕೆ ಕೆ ಈ ಆರ್ ಟಿ ಸಿ ಸಂಸ್ಥೆಯ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರ ಅಂದರೆ ಹಾಲ್ ಟಿಕೆಟ್ […]