ದ್ವಿತೀಯ ಪಿಯು ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ

ವಿಜಯಪುರ: ಸ. 3ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷೆ ಕೇಂದ್ರಗಳ ವರೆಗೆ ತೆರಳಲು ಮತ್ತು ಹಿಂದಿರುಗಲು ಕೆ ಕೆ ಈ ಆರ್ ಟಿ ಸಿ ಸಂಸ್ಥೆಯ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರ ಅಂದರೆ ಹಾಲ್ ಟಿಕೆಟ್ ಮತ್ತು ಆಧಾರ ಕಾರ್ಡ ತೋರಿಸಿದರೆ ಪರೀಕ್ಷೆಗಳು ನಡೆಯುವ ದಿನ ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗುತ್ತಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌