ವಿಜಯಪುರ-ಬಾಗಲಕೋಟೆ ಜಿಲ್ಲೆಗಳಿಗೆ ಪ್ರತಿದಿನ 25 ಸಾವಿರ ಕೊರೊನಾ ಲಸಿಕೆ ನೀಡಲು ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ವಿಶೇಷವಾಗಿ ಪ್ರತಿ ದಿನಕ್ಕೆ ತಲಾ 25 ಸಾವಿರ ಕೊರೊನಾ ಲಸಿಕೆಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಜಯಪುರ: ಕೋವಿಡ್- 19 3ನೇ ಅಲೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ […]

ತಜ್ಞರ ಅಭಿಪ್ರಾಯ ಕೇಳಿದ್ದರೆ ಇಂದು ಈ ಭಾಗಕ್ಕೆ ನೀರು ಬರುತ್ತಿರಲಿಲ್ಲ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಹೆಚ್ಚಿಸಿದಾಗ ಮಾತ್ರ ಮಾತ್ರ ನಮ್ಮ ಭಾಗಕ್ಕೆ ನೀರು ಹರಿಸಲು ಸಾಧ್ಯ ಎಂಬ ತಜ್ಞರ ಆಭಿಪ್ರಾಯವನ್ನು ತಾವು ಒಪ್ಪಿದ್ದರೆ ಇಂದು ನಮ್ಮ ಭಾಗ ನೀರಾವರಿಗೆ ಒಳಪಡುತ್ತಿರಲಿಲ್ಲ ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ತಿಡಗುಂದಿ ಅಕ್ವಾಡಕ್ಟ್ ಮೂಲಕ ಡೊಮನಾಳ ಕೆರೆಗೆ ನೀರು ಹರಿಸಲಾಗಿದ್ದು, ಈಗ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಡೋಮನಾಳ ಗ್ರಾಮಸ್ಥರು ಏರ್ಪಡಿಸಿದ್ದ ಗಂಗಾಪೂಜೆಯಲ್ಲಿ ಪಾಲ್ಗೊಂಡು ಅವರು […]

ವಿಜಯಪುರ ಎಸ್ಪಿ ಬಗ್ಗೆ ಸಿಎಂ ಗರಂ, ಬೆಳಗಾವಿ ಐಜಿಗೂ ಕಿವಿಮಾತು ಹೇಳಿದ ಮುಖ್ಯಮಂತ್ರಿಗಳು- ಯಾಕೆ ಗೊತ್ತಾ?

ವಿಜಯಪುರ: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಗೆ ಬಂದ ಬಸವರಾಜ ಬೊಮ್ಮಾಯಿ ಎಸ್ಪಿ ವಿರುದ್ಧ ಗರಂ ಆದ ಘಟನೆ ನಡೆಯಿತು. ಅಲ್ಲದೇ, ಇದೇ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಲಯ ಐಜಿಗೂ ಸಿಎಂ ಕಿವಿಮಾತು ಹೇಳುವ ಮೂಲಕ ಖಡಕ್ ಸಂದೇಶ ರವಾನಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂದರೆ, ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರರಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಲಮಟ್ಟಿಗೆ ಆಗಮಿಸಿದ್ದರು. ವಿಶೇಷ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ಹೆಲಿಪ್ಯಾಡಿಗೆ […]

ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಡಾ. ಈರಣ್ಣ ಎಸ್. ಧಾರವಾಡಕರ ಚಾಲನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರು ಮತ್ತು ಅವರ ಕುಟುಂಬ ಸದಸ್ಯರುಗಳಿಗೆ ಕ್ಷಯರೋಗದ ಕುರಿತು ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಆಯೋಜಿಸಲಾಗಿದೆ. ವಿಜಯಪುರ ನಗರದ ಶ್ರೀ ಶಂಕರಲಿಂಗ ದೇವಸ್ಥಾನದ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮಮವನ್ನು ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ. ಈರಣ್ಣ ಎಸ್. ಧಾರವಾಡಕರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ದೊಡಮನಿ, ನವಬಾಗ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜೀನತ, ಜಿಲ್ಲಾ ಎನ್ ಜಿ ಓ ಸಂಘದ ಅಧ್ಯಕ್ಷ […]

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ- ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ವಿಜಯಪುರ: ಆ. 22ರಂದು ವಿಜಯಪುರ ಜಿಲ್ಲೆಯಲ್ಲಿ 37 ಪರೀಕ್ಷೆ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆ(ಕೆ ಎ ಆರ್ ಟಿ ಇ ಟಿ) ನಡೆಯಲಿವೆ. ಈ ಸಂದರ್ಭದಲ್ಲಿ ಪರೀಕ್ಷೆ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ತಿಳಿಸಿದ್ದಾರೆ. ಪರೀಕ್ಷೆ ತಯಾರಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ನ್ನು […]

ಮಾನಸಿಕ. ದೈಹಿಕ ಆರೋಗ್ಯಕ್ಕಾಗಿ ಪ್ರತಿನಿತ್ಯ ಕನಿಷ್ಠ 30 ನಿಮಿಷ ಓಟ, ವ್ಯಾಯಾಮ, ಯೋಗಾಭ್ಯಾಸ ಅಗತ್ಯ- ಐಎಎಸ್ ತರಬೇತಿ ನಿರತ ಅಧಿಕಾರಿ ರಿಷಿ ಆನಂದ

ವಿಜಯಪುರ: ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಪ್ರತಿನಿತ್ಯ ಕನಿಷ್ಠ 30 ನಿಮಿಷಗಳ ಕಾಲ ಓಟ, ವ್ಯಾಯಾಮ, ಮತ್ತು ಯೋಗಭ್ಯಾಸವನ್ನು ಮಾಡಬೇಕು ಎಂದು ಐಎಎಸ್ ತರಬೇತಿ ನಿರತ ಅಧಿಕಾರಿ ರಿಷಿ ಆನಂದ ಹೇಳಿದ್ದಾರೆ. ವಿಜಯಪುರದಲ್ಲಿ ಕೇಂದ್ರ ಸರಕಾರದ ನೆಹರು ಯುವ ಕೇಂದ್ರ, ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಎನ್ ಎಸ್ ಎಸ್ ಘಟಕ, ಭಾರತ ಸೇವಾ ದಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಜಯಪುರ ಯುತ್ ಮಾರ್ಶಲ್ ಆರ್ಸ್ಟ್ ಸಂಯುಕ್ತಾಶ್ರಯದಲ್ಲಿ […]

ಭರ್ತಿಯಾದ ಆಲಮಟ್ಟಿ ಜಲಾಷಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ತಿಯಾಗಿರುವ ಆಲಮಟ್ಟಿ ಜಲಾಷಯಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಂಸದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಂ. ಬಿ. ಪಾಟೀಲ, ಯಶವಂತರಾಯಗೌಡ ಪಾಟೀಲ, ಶಿವಾನಂದ ಫಾಟೀಲ, ಎ. ಎಸ್. ಪಾಟೀಲ ನಡಹಳ್ಳಿ, ವಿಧಾನ ಫರಿಷತ ಸದಸ್ಯರಾದ ಅರುಣ ಶಹಾಫುರ, ಪ್ರಕಾಶ ರಾಠೋಡ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, […]