ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ- ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ವಿಜಯಪುರ: ಆ. 22ರಂದು ವಿಜಯಪುರ ಜಿಲ್ಲೆಯಲ್ಲಿ 37 ಪರೀಕ್ಷೆ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆ(ಕೆ ಎ ಆರ್ ಟಿ ಇ ಟಿ) ನಡೆಯಲಿವೆ. ಈ ಸಂದರ್ಭದಲ್ಲಿ ಪರೀಕ್ಷೆ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ತಿಳಿಸಿದ್ದಾರೆ.

ಪರೀಕ್ಷೆ ತಯಾರಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್ನ್ನು ಮಾತ್ರ ಬಳಸಬಹುದಾಗಿದೆ ಎಂದು ಅವರು ಸೂಚಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕೊರೊನಾ ಮಾರ್ಗಸೂಚಿ ಪಾಲಿಸಿ ಪ್ರವೇಶ ನೀಡಲಾಗುವುದು. ಪರೀಕ್ಷೆ ನಡೆಯುವ ದಿನ ಬೆ. 9.30ರಿಂದ ಪರೀಕ್ಷೆ ಮುಕ್ತಾಯದವರೆಗೆ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಿಗೆದ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್. ವಿ. ಹೊಸೂರ, ಜಿಲ್ಲಾ ಹಾಗೂ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಎಸ್. ಎ. ಮುಜಾವರ, ಮಂಜುನಾಥ ಗುಳ್ಳೇದಗುಡ್ಡ, ಎನ್. ದೊಡಮನಿ ಮತ್ತು ಇತರ ಅಧಿಕಾರಗಿಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌