ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರು ಮತ್ತು ಅವರ ಕುಟುಂಬ ಸದಸ್ಯರುಗಳಿಗೆ ಕ್ಷಯರೋಗದ ಕುರಿತು ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಆಯೋಜಿಸಲಾಗಿದೆ.
ವಿಜಯಪುರ ನಗರದ ಶ್ರೀ ಶಂಕರಲಿಂಗ ದೇವಸ್ಥಾನದ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮಮವನ್ನು ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ. ಈರಣ್ಣ ಎಸ್. ಧಾರವಾಡಕರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ದೊಡಮನಿ, ನವಬಾಗ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜೀನತ, ಜಿಲ್ಲಾ ಎನ್ ಜಿ ಓ ಸಂಘದ ಅಧ್ಯಕ್ಷ ಪೀಟರ್ ಅಲೆಗ್ಜಾಂಡರ, ಶ್ರೀ ಶಂಕರಲಿಂಗ ದೇವಸ್ಥಾನ ಸಮಿತಿ ಉಪಾಧ್ಯಕ್ಷ ಮತ್ತು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟೆ ಮುಂತಾದವರು ಉಪಸ್ಥಿತರಿದ್ದರು.