ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಮಗ್ರ ಅಭಿವೃದ್ದಿಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡುತ್ತಿದೆ. ಈ ತಾಲೂಕಿನ ಬಡಜನರಿಗಾಗಿ 5000 ಮನೆಗಳನ್ನು ಮಂಜೂರು ಮಾಡಿರುವುದು ಇದಕ್ಕೆ ಸಾಕ್ಷಿ ಎಂದು ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ತಮ್ಮ ಸರಕಾರವು ಸಿಂದಗಿ ತಾಲೂಕಿನ ಬಡ ಜನರಿಗೆ ಸ್ವಂತ ಸೂರನ್ನು ನಿರ್ಮಿಸಿಕೊಳ್ಳಲು 5000 ಮನೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಅರುಣ ಶಹಾಪುರ ತಿಳಿಸಿದ್ದಾರೆ.