ಕೈಗಾರಿಕೆಗಳ ಆಸ್ತಿ ತೆರಿಗೆ ಬಗ್ಗೆ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚಿಸಿ ಕ್ರಮ-ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ಆಸ್ತಿ ತೆರಿಗೆ ಬಗ್ಗೆ ಕೈಗಾರಿಕೋದ್ಯಮಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಹಾಲ ಬಗಾಯತನಲ್ಲಿರುವ ಕೈಗಾರಿಕೆ ಘಟಕಗಳಿಗೆ ವಿಧಿಸಿರುವ ಆಸ್ತಿ ತೆರಿಗೆ ಬಗ್ಗೆ ಕೈಗಾರಿಕೋದ್ಯಮಿಗಳ ಜೊತೆ ಮಹಾನಗರಪಾಲಿಕೆಯ ಆಯುಕ್ತರು, ಮಹಾನಗರಪಾಲಿಕೆಯ ಕಂದಾಯ ಅಧಿಕಾರಿಗಳು, ಬೆಳಗಾವಿ ಸಹಾಯಕ ಪ್ರಧಾನ ವ್ಯವಸ್ಥಾಪಕರು ಜಂಟಿಯಾಗಿ ಚರ್ಚಿಸಿ ಈ ಕುರಿತು ಸೂಕ್ತ ನಿರ್ಣಯ […]
ಜಲವಿವಾದ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಎಲ್ಲ ಜಲ ವಿವಾದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು […]
ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೂಚನೆ
ವಿಜಯಪುರ: ಆ. 28 ರಿಂದ 30ರ ವರೆಗೆ ವಿಜಯಪುರ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆ ಎಸ್‍ಒಪಿ ನಿಯಮಾವಳಿ ಅನ್ವಯ ವ್ಯವಸ್ಥಿತ ಮತ್ತು ನಕಲು ಮುಕ್ತವಾಗಿ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ. 28 ರಂದು ಶನಿವಾರ ಜೀವಶಾಸ್ತ್ರ, ಗಣಿತ, ಅ. […]
ನವದೆಹಲಿಯಲ್ಲಿ ಪೊಲೀಸ್ ಸ್ಮಾರಕ, ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಸಂದರ್ಶಕರ ಪುಸ್ತಕದಲ್ಲಿ ಅಭಿಪ್ರಾಯ ದಾಖಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
ನವದೆಹಲಿ: ರಾಷ್ಟ್ರ ರಾಜಧಾನಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯಲ್ಲಿ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದ ಸಿಎಂ, ಸ್ಮಾರಕಕ್ಕೆ ಭೇಟಿ ನೀಡಿರುವುದು ಅವಿಸ್ಮರಣೀಯ ಘಳಿಗೆ. ಈ ಮ್ಯೂಸಿಯಂ ಪೊಲೀಸರ ಕರ್ತವ್ಯಪರತೆ ಹಾಗೂ ಸಮರ್ಪಣಾ ಭಾವದ ಕುರಿತು ಒಳನೋಟ ನೀಡುತ್ತದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿರುವ ಕಾರಣ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಈ ಭೇಟಿಯು ನನ್ನಲ್ಲಿ ಸಮರ್ಪಣಾ ಭಾವ ಮತ್ತು ಕರ್ತವ್ಯಪ್ರಜ್ಞೆಯನ್ನು ಜಾಗೃತಗೊಳಿಸಿದೆ. ದೇಶದ […]
ಮೊಹರಂ ಅಂಗವಾಗಿ ಸಾಂಗವಾಗಿ ಸಾಗಿದ ಮೂರು ದಿನಗಳ ಜಾರತ್ ಕಾರ್ಯಕ್ರಮ- ಗಮನ ಸೆಳೆದ ಹುಲಿವೇಷಿಗಳ ನಾಟ್ಯ
ವಿಜಯಪುರ: ಪವಿತ್ರ ಮೊಹರಂ ಹಬ್ಬದ ಅಂಗವಾಗಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವಾಪೂರ ಗ್ರಾಮದಲ್ಲಿ ಮೂರು ದಿನದ ಜಾರತ್ ಕಾರ್ಯಕ್ರಮದ ಅಂಗವಾಗಿ ಹೆಜ್ಜೆ ಮೇಳ ನಡೆಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮೋಹರಂ ಹಬ್ಬ ಬಂತೆಂದರೆ ಸಾಕು ವಿಶಿಷ್ಟವಾದ ಆಚರಣೆ ನಡೆಸುವ ಮೂಲಕ ಗ್ರಾಮಸ್ಥರು ಗಮನ ಸೆಳೆಯುತ್ತಾರೆ. ಅನೇಕತೆಯಲ್ಲಿ ಏಕತೆ ಎಂಬಂತೆ ಈ ಗ್ರಾಮೀಣ ಪ್ರದೇಶಗಳಲ್ಲಿ ಹಿಂದು ಮತ್ತು ಮುಸ್ಲಿಂ ಭಾುವೈಕ್ಯದ ಸಂಕೇತವಾಗಿ ಮೊಹರಂ ಹಬ್ಬವನ್ನು ಆಚರಿಸಲಾಗುತ್ತದೆ. ಈ ಮೋಹರಂ ಹಬ್ಬವ ಆಗಮನಕ್ಕೂ ಒಂದು ತಿಂಗಳು ಮುಂಚಿತವಾಗಿ ಹೆಜ್ಜೆ ಮೇಳಗಳಲ್ಲಿ […]
ಜಿ ಎಸ್ ಟಿ ಪರಿಹಾರ ವಿಸ್ತರಣೆ, 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರಕಾರದಿಂದ ಜಿ ಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಮತ್ತು 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೋವಿಡ್ ಸಾಂಕ್ರಾಮಿಕದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿ ಎಸ್ ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ […]
ಬೇಲಿಯೆ ಎದ್ದು ಹೊಲ ಮೇಯ್ದಂತಾಗಿದೆ ಭೀಮಾ ತೀರದ ರೈತರ ಗೋಳು- ಮೋಸದಿಂದ ರೈತರ ಹೆಸರಲ್ಲಿ ಸಾಲ ಮಾಡಿದ ಮಹಾ ಮೂಲದ ಸಕ್ಕರೆ ಕಾರ್ಖಾನೆ
ವಿಜಯಪುರ: ಈಗಾಗಲೇ ರೈತರು ಕೊರೊನಾ ಮತ್ತು ಲಾಕಡೌನ್ ನಿಂದಾಗಿ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಇಂಥ ಸುಮಾರು 2800ಕ್ಕೂ ಹೆಚ್ಚು ರೈತರಿಗೆ ಗಾಯದ ಮೇಲೆ ಬರೆ ಎಳೆಯುವ ಕೆಲವನ್ನು ಮಹಾರಾಷ್ಟ್ರ ಮೂಲಕ ಸಕ್ಕರೆ ಕಾರ್ಖಾನೆ ಮಾಡಿದೆ. ವಿಜಯಪುರ ಜಿಲ್ಲೆಯ ಭೀಮಾ ತೀರದ ಚಡಚಣ ತಾಲೂಕಿನ ಹಾವಿನಾಳ ಶುಗರ್ಸ್ ಕಾರ್ಖಾನೆ ಕಳೆದ ಹಲವಾರು ವರ್ಷಗಳಿಂದ ರೈತರಿಂದ ಕಬ್ಬು ಖರೀದಿಸಿ ಬಾಕಿ ಹಣವನ್ನು ಸರಿಯಾದ ಸಮಯಕ್ಕೆ ನೀಡದೇ ಸತಾಯಿಸುತ್ತಲೇ ಬಂದಿತ್ತು. ಇದೀಗ ತೀರ ಅತೀರೇಕ ಎಂಬಂತೆ ಎರಡನೇ ಬಾರಿ ರೈತರಿಗೆ ಗೊತ್ತಾಗದೆ ಅವರ […]