ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೂಚನೆ

ವಿಜಯಪುರ: ಆ. 28 ರಿಂದ 30ರ ವರೆಗೆ ವಿಜಯಪುರ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆ ಎಸ್‍ಒಪಿ ನಿಯಮಾವಳಿ ಅನ್ವಯ ವ್ಯವಸ್ಥಿತ ಮತ್ತು ನಕಲು ಮುಕ್ತವಾಗಿ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ. 28 ರಂದು ಶನಿವಾರ ಜೀವಶಾಸ್ತ್ರ, ಗಣಿತ, ಅ. 29 ರಂದು ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ, ಅ. 30 ರಂದು ಕನ್ನಡ ವಿಷಯ ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿವೆ. ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಜೊತೆಗೆ ಪರೀಕ್ಷೆಗಳು ನಕಲು ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಿಜಯಪುರದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿದ್ಧತೆ ಕುರಿತ ಸಭೆಯಲ್ಲಿ ಪಾಲ್ಗೋಂಡ ಅಧಿಕಾರಿಗಳು.

ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳು ಮತ್ತು ನೋಂದಣಿಯಾದ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಇತರರಿಗೆ ಅವಕಾಶ ಇರುವುದಿಲ್ಲ. ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ಮುಂಚಿತವಾಗಿ ಸ್ಯಾನಿಟೈಜೇಶನ್ ಮಾಡಬೇಕು. ಸುವ್ಯವಸ್ಥಿತ ಪರೀಕ್ಷೆ ನಡೆಸಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು. ಎಎಸ್‍ಪಿ ಕಾಲೇಜ ಆಫ್ ಕಾಮರ್ಸ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯ ಕ್ರಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಅಂಬ್ಯುಲೆನ್ಸ್ ವೊಂದನ್ನು ಸಿದ್ಧವಾಗಿ ಇಟ್ಟುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೂಚನೆ ನೀಡಿದರು.

ಈ ಸಭೆಯಲ್ಲಿ ಮಾತನಾಡಿದ ಪ. ಪೂ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎನ್. ಬಗಲಿ, ಜಿಲ್ಲೆಯ 20 ಪರೀಕ್ಷೆ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 8400 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಜಯಪುರ ನಗರದಲ್ಲಿ 13, ಇಂಡಿ-2, ಸಿಂದಗಿ-3, ಮುದ್ದೇಬಿಹಾಳದಲ್ಲಿ 2 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕನಿಷ್ಠ ಒಂದು ಹೆಚ್ಚುವರಿ ಕೇಂದ್ರವನ್ನು ಗುರುತಿಸಿ ಕಾಯ್ದಿರಿಸಲಾಗುವುದು ಎಂದು ತಿಳಿಸಿojg.

 

Leave a Reply

ಹೊಸ ಪೋಸ್ಟ್‌