ಆ. 30ರ ನಂತರ ರಸ್ತೆಗಳ ಮೇಲೆ ಬೀಡಾಡಿ ದನಗಳು ಕಂಡರೆ ಮಹಾನಗರ ಪಾಲಿಕೆ ವಶಕ್ಕೆ ಪಡೆಯಲಾಗುವುದು- ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಖಡಕ್ ಎಚ್ಚರಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅದರಲ್ಲಿಯೂ ವಿಜಯಪುರ ನಗರದಲ್ಲಿ ಹೆಚ್ಚಾಗಿರುವ ಬಿಡಾಡಿ ದನಗಳ ನಿಯಂತ್ರಣಕ್ಕಾಗಿ ಕೇವಲ ಎಚ್ಚರಿಕೆ ನೀಡದೇ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಹಾನಗರ ಪಾಲಿಕೆ ಆಯುಕ್ತರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾಣಿ ದಯಾ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು […]

ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ವಾತಂತ್ರ್ಯ ಬಂದ ನಂತರ ಅಸಂಘಟಿತ ಕಾರ್ಮಿಕರ ನೋಂದಣಿ ಮೊದಲ ಬಾರಿ ನಡೆಯುತ್ತಿದೆ. ಅವರನ್ನು ಗುರುತಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಜೀವನದ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು ಎಂದು ಆಶಿಸಿದರು. […]

ಸತ್ಯಸಾಯಿ ಅವರ ಪ್ರಭಾವದಿಂದ ಜೀವನದಲ್ಲಿ ಸಾಕಷ್ಟು ಕಲಿತಿದ್ದೇನೆ- ಸಿಎಂ ಬಸವರಾಜ ಬೊಮ್ಮಾಯಿ

ಚಿಕ್ಕಬಳ್ಳಾಪುರ: ಸತ್ಯಸಾಯಿ ಅವರ ಪ್ರಭಾವದಿಂದಾಗಿ ತಾವು ಜೀವನದಲ್ಲಿ ಸಾಕಷ್ಟು ಕಲಿತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಿಸಿರುವ 300 ಹಾಸಿಗೆಗಳ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಸತ್ಯಸಾಯಿ ಅವರ ಪ್ರಭಾವ ತಮ್ಮ ಮೇಲೆ ಸಾಕಷ್ಠಿದೆ. ನಾನು 1998ರಲ್ಲಿ ಸತ್ಯಸಾಯಿ ಬಾಬಾ ಅವರ ದರ್ಶನ ಪಡೆದಿದ್ದೆ. ಆ ಸಂದರ್ಭದಲ್ಲಿ ಸಸ್ಯಾಹಾರ ಮತ್ತು […]

ರಾಜ್ಯದಲ್ಲಿ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರಕಾರದ ಬೆಂಬಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉದ್ಯೋಗ ಸೃಷ್ಠಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ‌ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂಥ ಅತ್ಯಾಧುನಿಕ ಜುವೆಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯವಿರುವ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದ್ದಾರೆ. ‌ ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಅವರು ಮಾತನಾಡಿದರು. ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಪರಿಸ್ಥಿತಿ ಇದೆ. […]

ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ಪೂರೈಕೆ, ಮೆಗಾ ಟೆಕ್ಸಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಒಪ್ಪಿಗೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಲಾಗಿದೆ. ಈಗ ಪ್ರತಿ ದಿನ 3.50 ಲಕ್ಷ ದಿಂದ 4 ಲಸಿಕೆ ರಾಜ್ಯಕ್ಕೆ ಲಸಿಕೆ ಪೂರೈಕೆಯಾಗುತ್ತಿದೆ. ಸೆಪ್ಟೆಂಬರ್ ತಿಂಗಳಿಂದ ಪ್ರತಿ ದಿನ 5 ಲಕ್ಷ ಲಸಿಕೆ ಹಾಕಲು ರಾಜ್ಯ […]