ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ಪೂರೈಕೆ, ಮೆಗಾ ಟೆಕ್ಸಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಒಪ್ಪಿಗೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಲಾಗಿದೆ. ಈಗ ಪ್ರತಿ ದಿನ 3.50 ಲಕ್ಷ ದಿಂದ 4 ಲಸಿಕೆ ರಾಜ್ಯಕ್ಕೆ ಲಸಿಕೆ ಪೂರೈಕೆಯಾಗುತ್ತಿದೆ. ಸೆಪ್ಟೆಂಬರ್ ತಿಂಗಳಿಂದ ಪ್ರತಿ ದಿನ 5 ಲಕ್ಷ ಲಸಿಕೆ ಹಾಕಲು ರಾಜ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂಬ ಸಂಗತಿಯನ್ನು ಕೇಂದ್ರ ಆರೋಗ್ಯ ಸಚಿವರ ಗಮನಕ್ಕೆ ತರಲಾಯಿತು. ರಾಜ್ಯದ ಈ ಪ್ರಸ್ತಾವನೆಗೆ ಅವರು ಒಪ್ಪಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡುವ ಭರವಸೆ ನೀಡಿದರು ಎಂದು ಮುಖ್ಮಯಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ಸಚಿವ ಪಿಯುಷ ಗೋಯಲ್ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು.

ರಾಜ್ಯಕ್ಕೆ ಮೆಗಾ ಟೆಕ್ಸಟೈಲ್ ಪಾರ್ಕ್ ನೀಡಲು ಕೇಂದ್ರ ಒಪ್ಪಿಗೆ

ಈ ಮಧ್ಯೆ, ಹೊಸ ಜವಳಿ ನೀತಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೇಂದ್ರ ಜವಳಿ ಖಾತೆ ಸಚಿವರಾದ ಪಿಯೂಶ ಗೋಯಲ್ ಅವರನ್ನು ಭೇಟಿ ಮಾಡಿದ್ದೆ. ಈ ಸಂದರ್ಭದಲ್ಲಿ ಅವರು ವಿಷಯ ತಿಳಿಸಿದರು ಎಂದು ಸಿಎಂ ಹೇಳಿದರು.

ಧರ್ಮೇಂದ್ರ ಪ್ರಧಾನ ಭೇಟಿ

ಇದೇ ವೇಳೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದೆ. ಈ ನೀತಿಯನ್ನು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಅನುಷ್ಠಾನಕ್ಕೆ ತಂದ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಪಾತ್ರವಾಗಿದೆ ಎಂದು ಸಿಎಂ ತಿಳಿಸಿದರು.

 

CM-Pradhan
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಖಾತೆ ಸಚಿವರಾದ ಗೋವಿಂದ ಕಾರಜೋಳ, ಆರೋಗ್ಯ ಸಚಿವರಾದ ಡಾ. ಕೆ.‌ಸುಧಾಕರ, ಸಂಸದ ಶಿವಕುಮಾರ್ ಉದಾಸಿ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

CM-Commerce-Minister
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಕಾರ್ಪೊರೇಟ್ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ, ಮುರುಗೇಶ್ ನಿರಾಣಿ ಹಾಗೂ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌