ವಿಜಯಪುರ ನಗರದಲ್ಲಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರ ಜೊತೆ ವಿಜಯಪುರ ನಗರದ ನಾನಾ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಬೆಳ್ಳಂಬೆಳಿಗ್ಗೆ ವಿಜಯಪುರ ನಗರದ ಜುಮ್ಮಾ ಮಸೀದಿ ಹತ್ತಿರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ ಕುಡಿಯುವ ನೀರಿನ ಕಾಮಗಾರಿಗಾಗಿ ಅಗೆದ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ಅಲ್ಲದೇ, ಒಂದು ವಾರದಲ್ಲಿ ಈ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಮತ್ತು ವಾಹನ […]

ಸಮಾಜ ಸೇವಕ ಸಂಗಮೇಶ ಬಬಲೇಶ್ವರ ಅವರಿಂದ ಜ್ಞಾನ ಜೋಳಿಗೆ ಅಭಿಯಾನ- ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಂದ ಚಾಲನೆ

ಬಾಗಲಕೋಟೆ: ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಜ್ಞಾನ ಜೋಳಿಗೆ ಅಭಿಯಾನ ಆರಂಭಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಎಂದೇ ಹೆಸರಾಗಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿ ಗ್ರಂಥ ದಾಸೋಹ ಮಾಡುವ ಮೂಲಕ ಬಾಗಲಕೋಟೆ ಜಿಲ್ಲೆಯ ರಬಕವಿಯಲ್ಲಿ ಚಾಲನೆ ನೀಡಿದರು. ಈ ಕಾರ್ಯಕ್ಕಾಗಿ ಸಂಗಮೇಶ ಬಬಲೇಶ್ವರ ಅವರು ಜ್ಞಾನ ಜೋಳಿಗೆ ಫೌಂಡೇಶನ್ ಆರಂಭಿಸಿದ್ದು, ವಿನೂತನ ಮತ್ತು ವಿಭಿನ್ನ ಅಭಿಯಾನ ಇದಾಗಿದೆ. ಈ ಸಂದರ್ಭದಲ್ಲಿ ಈ ವಿಶಿಷ್ಟ ಯೋಜನೆ ಕುರಿತು ಜ್ಞಾನ ಜೋಳಿಗೆ ಫೌಂಡೇಶನ್ನಿನ […]

ಮೈಸೂರು ಗ್ಯಾಂಗ್ ರೇಪ್ ಆರೋಪ ಪ್ರಕರಣ- ಆದಷ್ಟು ಬೇಗ ಆರೋಪಿಗಳ ಬಂಧನ- ಸಿಎಂ

ಬೆಂಗಳೂರು: ಮೈಸೂರು ನಡೆದ ಗ್ಯಾಂಗ್ ರೇಪ್ ಆರೋಪ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಅತೀ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ತವರು ಜಿಲ್ಲೆ ಹಾವೇರಿಗೆ ಪ್ರಯಾಣ ಬೆಳೆಸುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪೊಲೀಸರು ಈ ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸಲಾಗಿದೆ. ಆ ತಂಡಗಳು ತಮ್ಮ ಕೆಲಸವನ್ನು ಮಾಡುತ್ತಿವೆ ಎಂದು ತಿಳಿಸಿದರು. ಆರೋಪಿಗಳನ್ನು ಬಂಧಿಸುವಂತೆ ನಾನು ಮೊನ್ನೆಯೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. […]

ಪಾರಂಪರಿಕ ಕಸುಬುದಾರರ ನೆರವಿಗೆ ಸರಕಾರ ಆದ್ಯತೆ ನೀಡಲಿದೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೈವಜ್ಞ ಬ್ರಾಹ್ಮಣ ಸಮಾಜ ಹಾಗೂ ಇತರ ಸಮುದಾಯದವರು ತಮ್ಮ ಪಾರಂಪರಿಕ ಕಸುಬನ್ನು ಉಳಿಸಿ ಬೆಳೆಸಲು ಸರಕಾರ ಎಲ್ಲ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ವರ್ಚುವಲ್ ಕಾರ್ಯಕ್ರಮದಲಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಲ್ಲಿ ಕುಲಕಸುಬುಗಳನ್ನು ಉಳಿಸಿ ಬೆಳೆಸಿಕೊಳ್ಳುವ ನಾನಾ ಸಮುದಾಯಗಳ ಪ್ರಯತ್ನ ಅತ್ಯಂತ ಅಭಿಮಾನ ಪಡುವ ವಿಷಯ […]

ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ- ಸಂರಕ್ಷಿತ ದರ ಒದಗಿಸಲು ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಎಣ್ಣೆಕಾಳು ಉತ್ಪಾದನೆಗೆ ಒತ್ತು ನೀಡುವುದು ಮತ್ತು ತಾಳೆ ಬೆಳೆಗೆ ಉತ್ತೇಜನ, ಕೃಷಿ ಉತ್ಪನ್ನ ಸಂಸ್ಕರಣೆ ರಫ್ತಿಗೆ ಒತ್ತು ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಕೃಷಿ ವಿಷಯಗಳ ಕುರಿತು ಚರ್ಚೆ ನಡೆಸಿದರು. ಚರ್ಚಿಸಲಾಯಿತು. ರಾಜ್ಯದಲ್ಲಿ ಎಣ್ಣೆಕಾಳು ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ. ಆದರೆ ರೈತರಿಗೆ ವೈಜ್ಞಾನಿಕ ತರಬೇತಿ ಹಾಗೂ ಹೆಚ್ಚಿನ ಬೆಂಬಲದ ಅಗತ್ಯವಿದೆ. ಬೆಲೆಯಲ್ಲಿ ಭಾರಿ […]