ತಮ್ಮ ಜೀವ ಹೋದರೆ ಸರಕಾರವೇ ಹೊಣೆ ಎಂದು ಜೆಡಿಎಸ್ ಶಾಸಕ ಎಚ್ಚರಿಕೆ- ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರೂ ಜನರ ನೆರವಿಗೆ ಧಾವಿಸಿದ ಜನಪ್ರತಿನಿಧಿ
ವಿಜಯಪುರ: ಒಂದೆಡೆ ಅನಾರೋಗ್ಯಕ್ಕೆ ಚಿಕಿತ್ಸೆ. ಮತ್ತೋಂದೆಡೆ ಜನರ ಸಮಸ್ಯೆಯ ಕಾಳಜಿ. ಹೇಳಿದರೂ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯ ಸ್ವತಃ ಗುದ್ದಲಿ ಮತ್ತು ಸನಿಖೆ ಖರೀದಿಸಿ ಚರಂಡಿ ಸ್ವಚ್ಛತೆಗೆ ಮುಂದಾಗುವ ಮೂಲಕ ಶಾಸಕರು ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ತಮ್ಮ ಜೀವಕ್ಕೆ ಅಪಾಯವಾದರೆ ಅದಕ್ಕೆ ಸರಕಾರವೇ ಹೊಣೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಘಟನೆಗೆ ಸಾಕ್ಷಿಯಾಗಿದ್ದು ಗುಮ್ಮಟ ನಗರಿ ವಿಜಯಪುರದ ಖಾವಿ ಪ್ಲಾಟ್. ಈ ಪ್ರದೇಶದಲ್ಲಿ ಪ್ರತಿಬಾರಿ ಮಳೆ ಬಂದಾಗ ಇಲ್ಲಿನ ರಸ್ತೆಗಳು ಜಲಾವೃತವಾಗಿ ಮರಂಡಿ ಮತ್ತು ಚರಂಡಿ ನೀರು […]
ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭ- ಸಿಎಂ ಕಚೇರಿಯಲ್ಲಿ ಇನ್ನು ಮುಂದೆ ಡ್ಯಾಷ್ ಬೋರ್ಡ್
ಬೆಂಗಳೂರು: ಬೆಂಗಳೂರಿನ ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ನಿಲ್ದಾದಣದವರೆಗೆ 7.50 ಕಿ. ಮೀ. ಉದ್ದದ ಮೆಟ್ರೋ ನೇರಳೆ ಮಾರ್ಗಕ್ಕೆ ಕೇಂದ್ರ ವಸತಿ, ನಗರ ವ್ಯವಹಾರ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರದೀಪಸಿಂಗ್ ಪುರಿ ಮತ್ತು ಮುಖ್ಯಮಂತಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಬೆಂಗಳೂರನ್ನು ನಿಜವಾದ ಅಂತರರಾಷ್ಟ್ರೀಯ ಕೇಂದ್ರವನ್ನಾಗಿಸಲು ಸರಕಾರ ಸರ್ವ ಪ್ರಯತ್ನ ಮಾಡಲಿದೆ. ಮೆಟ್ರೋ ಇನ್ನಷ್ಟು ಜನರನ್ನು ಸಾಗಿಸುವ ಸಾಮರ್ಥ್ಯ ಹೊಂದಬೇಕು. ಒಟ್ಟು 317 […]