ವಿಜಯಪುರ ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನು ಮುಂದೆ ವಿಕೇಂಡ್ ಕರ್ಫ್ಯೂ ಇಲ್ಲ- ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರ
ಬೆಂಗಳೂರು: ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಕೆಲವು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್-19 ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿತ್ತು. ಇದೀಗ ಕೆಲವು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಸರಕಾರ ವೀಕೆಂಡ್ ಕರ್ಫ್ಯೂ ಹಿಂಪಡೆದಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ […]
ಎಸ್ಸಿ, ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ […]
ಬಸವ ನಾಡಿನಲ್ಲಿ ಖ್ಯಾತ ಸಂಶೋಧಕ, ನಾಡೋಜ ಡಾ. ಎಂ. ಎಂ. ಕಲಬುರ್ಗಿ ಅವರ 6ನೇ ಸಂಸ್ಮರಣೆ ದಿನಾಚರಣೆ
ವಿಜಯಪುರ: ವಿಜಯಪುರ ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಖ್ಯಾತ ಸಂಶೋಧಕ, ನಾಡೋ ಡಾ. ಎಂ. ಎಂ. ಕಲಬುರ್ಗಿ ಅವರ 6ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿ. ಡಿ. ಐಹೊಳ್ಳಿ, ನಾಡೋಜ ಡಾ. ಎಂ ಎಂ. ಕಲಬುರ್ಗಿ ಅವರು ನಡೆದು ಬಂದ ದಾರಿ ಬಗ್ಗೆ ಮಾಹಿತಿ ನೀಡಿದರು. ಯಾವುದೇ ವಿಷಯವಿದ್ದರೂ ಡಾ.ಎಂ. ಎಂ. ಕಲಬುರ್ಗಿ […]
ಬಸವ ನಾಡಿನಲ್ಲಿ ನಡೆಯಿತು ಕೃಷ್ಣ-ರಾಧೆಯರ ಫ್ಯಾನ್ಸಿ ಡ್ರೆಸ್ ಸ್ಪರ್ಧೆ- ಗಮನ ಸೆಳೆದ ಪುಟಾಣಿಗಳು
ವಿಜಯಪುರ: ಇಂದು ಗೋಕುಲಾಷ್ಠಮಿ. ಕೃಷ್ಣಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರದಲ್ಲಿ ಮಕ್ಕಳಿಗಾಗಿ ಕೃಷ್ಣ-ರಾಧೆಯರ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಆಯೋಜಿಸಲಾಗಿತ್ತು. ಲಯನ್ಸ್ ಕ್ಲಬ್ ಆಫ್ ಬಿಜಾಪುರ ವತಿಯಿಂದ ವಿಜಯಪುರ ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಈ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು. 3 ರಿಂದ 13 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಈ ಮುಕ್ತ ವೇಷಭೂಷಣ ಸ್ಪರ್ಧೆಯಲ್ಲಿ ಪಾಲ್ಗೊಂಡರು. ವಿಜಯಪುರ ನಗರದ ಶ್ರೀಕೃಷ್ಣನ ಭಕ್ತರು ಶ್ರದ್ಧಾಭಕ್ತಿಯಿಂದ ಮತ್ತು […]