ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಹೆಚ್ಚಿಗೆ ಹಣ ನೀಡಿ ಪೂರ್ಣಗೊಳಿಸಿ- ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಬಳಿ ಶ್ರೀ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಬಳಿ ಶ್ರೀ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಅನುಷ್ಠಾನಗೊಳಿಸಲು ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಬಜೆಟ್‌ ನಲ್ಲಿ ರೂ. 500 ಕೋ. ಹಣ ಮಂಜೂರು ಮಾಡಿದ್ದಾರೆ.

ನೀರಾವರಿ ಸಚಿವ ಕಾರಜೋಳರಿಗೆ ಪತ್ರ ಬರೆದ ಸಂಸದ ಜಿಗಜಿಣಗಿ.

 

 

ಆದರೆ, ಈ ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ. ಈ ಏತ ನೀರಾವರಿಯಿಂದ ಹೊರ್ತಿ ಗ್ರಾಮದ ಸುತ್ತಮುತ್ತಲಿನ ಸಾಕಷ್ಟು ಹಳ್ಳಿಗಳಿಗೆ ನೀರಿನ ಸೌಲಭ್ಯ ಒದಗಿಸಲಿದೆ. ಒದಗಿಸಿದಂತಾಗುವದಿಲ್ಲ. ಈ ವಿಷಯದ ಕುರಿತು ಈ ಭಾಗದ ರೈತರು ಹಲವಾರು ಬಾರಿ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈಗಲಾದರೂ ರೈತರ ಕನಸಿನ ಶ್ರೀ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಸಾಕಾರವಾಗಬೇಕಾಗಿದೆ.

ಈ ಹಿಂದೆ ಮಂಜೂರಾಗಿರುವ ರೂ. 500 ಕೋ. ಹಣದಿಂದ ಈ ಯೋಜನೆ ಪೂರ್ಣಗೊಳಿಸಲು ಸಾಕಾಗುವುದಿಲ್ಲ. ಆದ್ದರಿಂದ ಈ ವರ್ಷದ ಅಂದರೆ 2021-22ರ ಬಜೆಟ್ ನಲ್ಲಿ ಈ ಏತ ನೀರಾವರಿ ಯೋಜನೆಗೆ ರೂ. 2000 ಕೋ. ಅನುದಾನ ಒದಗಿಸಿ ಅನುಷ್ಠಾನಗೊಳಿಸಬೇಕು ರಮೇಶ ಜಿಗಜಿಣಗಿ ಪತ್ರದಲ್ಲಿ ಕೋರಿದ್ದಾರೆ.

Leave a Reply

ಹೊಸ ಪೋಸ್ಟ್‌