ವಿಜಯಪುರ: ವಿಜಯಪುರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ಮತ್ತು ಖ್ಯಾತ ಹಾಕಿ ಮಾಂತ್ರಿಕ ಮೇ. ಧ್ಯಾನಚಂದ ಜನ್ಮದಿನ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ವ್ಹಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಭೀಮಸೇನ ಕೋಕರೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೇ. ಧ್ಯಾನಚಂದ ಅವರು ಮಾಂತ್ರಿಕ ಹಾಕಿ ಆಟದ ಮೂಲಕ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹಲವಾರು ಚಿನ್ನದ ಪದಕಗಳನ್ನು ಜಯಿಸಿದ್ದರು. ಅವರಲ್ಲಿರುವ ಕಲೆಯನ್ನು ಇತರ ಕ್ರೀಡಾಪಟುಗಳು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಜಯಪುರ ನಗರದ ಹಾಕಿ ಸಂಸ್ಥೆಯ ಅಧ್ಯಕ್ಷ ಎಸ್. ಕೆ. ಇನಾಮದಾರ ಮಾತನಾಡಿ, ಧ್ಯಾನಚಂದ ಅವರು ಹಾಕಿ ಆಡುವಾಗ ಯಾವುದೇ ರೀತಿಯ ಹೆಚ್ಚಿನ ಸೌಲಭ್ಯಗಳು ಇರಲಿಲ್ಲ. ಆದರೂ ಕೂಡ ತಮ್ಮಲ್ಲಿರುವ ಪ್ರತಿಭೆಯ ಮೂಲಕ ಹಗಲಿರುಳು ಶ್ರಮಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಮೂಲಕ ಹಾಕಿ ಮಾಂತಿರ್ ಎನಿಸಿಕೊಂಡಿದ್ದಾರೆ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಗೊಳಸಂಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸೈಕ್ಲಿಂಗ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರಾಜು ಬಿರಾದಾರ, ಕಾರ್ಯದರ್ಶಿ ಸಂಜು ಫಡತರೆ, ತರಬೇತುದಾರರಾದ ಅಲಕಾ ಫಡತರೆ, ಸಂಜಯ ಆಕಾಶಿ, ವೈ. ಬಿ. ಜಂಪ್ಲೆ, ನದಾಫ, ಗೋಪಾಲ ಲಮಾಣಿ, ಎಸ್. ಎಸ್. ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.