ಕ್ಯಾನ್ಸರ್ ಪೀಡಿತ ಮುಸ್ಲಿಂ ಮಹಿಳೆಯರ ಚಿಕಿತ್ಸೆಗೆ ಸಹಾಯ ಧನ- ನಾನು ಘೋಷಣೆ ಮಾಡಿದ ಯೋಜನೆಯಲ್ಲ- ನಮಗೆ ಹಿಂದೂ-ಮುಸ್ಲಿಂ ಭೇದ-ಭಾವವಿಲ್ಲ- ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರ: ಕ್ಯಾನ್ಸರ್ ಪೀಡಿತ ಮುಸ್ಲಿಂ ಮಹಿಳೆಯರಿಗೆ ಸರಕಾರದಿಂತ ತಲಾ ಒಂದು ಲಕ್ಷ ರೂಪಾಯಿ ಸಹಾಯ ಧನ ನೀಡುವ ಯೋಜನೆ ತಾವು ಘೋಷಣೆ ಮಾಡಿದ್ದಲ. ಇದು 2009 ರಿಂದಲೇ ಜಾರಿಯಲ್ಲಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ನಗರದ ಅದೃಷ್ಟ ಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಈ ಯೋಜನೆ ಬಗ್ಗೆ ಬಹಳಷ್ಟು ಜನರು ತಪ್ಪು ತಿಳುವಳಿಕೆ ಹೊಂದಿದ್ದಾರೆ. ಹಜ್ ಮತ್ತು […]
ಯಾವ ಕ್ಲಾಸಲ್ಲಿ ಓದ್ತಾ ಇದಿಯಮ್ಮಾ? ಕ್ಲಾಸ್ ಶುರು ಆಗಿವೆಯಾ? ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಸಿಎಂ
ಹಾವೆರಿ: ಯಾವ ಕ್ಲಾಸಲ್ಲಿ ಓದ್ತಾ ಇದಿಯಮ್ಮಾ? ಕ್ಲಾಸ್ ಶುರು ಆಗಿವೆಯಾ? ಸರಿಯಾಗಿ ಓದಮ್ಮಾ. ಇವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ತಮ್ಮ ಸ್ವಕ್ಷೇತ್ರೆ ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಅರಟಾಳ ದುಂಡಸಿ ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಮಕ್ಕಳಿಗೆ ಕೇಳಿದ ಪ್ರಶ್ನೆಗಳಿವು. ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಮುಖ್ಯಮಂತ್ರಿಗಳು ತಡಸ ಗ್ರಾಮದಿಂದ ಹೊರಟ ನಂತರ ಮಾರ್ಗಮಧ್ಯದ ಅರಟಾಳದುಂಡಸಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ವಿದ್ಯಾರ್ಥಿಗಳು ಸಿಎಂ ಅವರನ್ನು ಸ್ವಾಗತಿಸಿದರು. […]
ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ- ಕ್ಷೇತ್ರದ ಒಳಗಡೆ ಬಂದಾಗ ನಿಮ್ಮ ಬಸವರಾಜ ಬೊಮ್ಮಾಯಿ- ಸಿಎಂ
ಹಾವೇರಿ: ತವರು ಜಿಲ್ಲೆ ಹಾವೇರಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ನಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾವಿ ತಾಲೂಕಿನ ತಡಸ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಎಂದು ಹೇಳುವ ಮೂಲಕ ತಾವೊಬ್ಬ ಸರಳ ರಾಜಕಾರಣಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮೆಚ್ಚುಗೆಯ ವ್ಯಕ್ತಪಡಿಸಿದರು. ನನ್ನ ಸಚಿವ ಸಂಪುಟದಲ್ಲಿರುವ […]
ಬಿ ಎಲ್ ಡಿ ಇ ಸಂಸ್ಥೆಯ ಫಾರ್ಮಸ್ಸಿ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ
ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ. ಎಂ. ಎಸ್. ಮಧಬಾವಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ. ಸಂಗನ ಬಸವ ಕಾಲೇಜ್ ಆಫ್ ಫಾರ್ಮಸಿ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಘಟನೆಗಳನ್ನು ಶಿಕ್ಷಕರು ಮಕ್ಕಳಿಗೆ […]
ಸೆ. 5 ರಂದು ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಕುರಿತು ನಿರ್ಧಾರ- ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಕುರಿತು ಸೆ. 5 ರಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಗೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು. ಜಿಲ್ಲಾವಾರು ಕೊವಿಡ್ ಪರಿಸ್ಥಿತಿ ಕುರಿತು ವರದಿ ನೀಡುವಂತೆ ತಜ್ಞರಿಗೆ ಕೇಳಿದ್ದೇವೆ. ಸೆ. 5 ರಂದು ಈ ಕುರಿತು ಸೂಕ್ತ ಪ್ರಕಟಿಸಿಲಾಗುವುದು ಎಂದು ತಿಳಿಸಿದರು. ಈಗಾಗಲೇ ನಾವು […]
ಆಯುಷ್ ಅರಿವು ಕಾರ್ಯಕ್ರಮ- ಡಾ. ರವಿ. ಎಸ್. ಕೋಟೆಣ್ಣವರ ಅವರಿಂದ ಉಪನ್ಯಾಸ
ಬಾಗಲಕೋಟೆ: ಬಾಗಲಕೋಟೆ ನಗರದ ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಆಯುಷ್ ಅರಿವು ಕಾರ್ಯಕ್ರಮ ನಡೆಯಿತು. ಆಜಾದಿಕಾ ಅಮೃತ ಮಹೋತ್ಸವ ಅಂಗವಾಗಿ ಬಿವಿವಿಎಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಜಿಲ್ಯಾದ್ಯಂತ ಆಯೋಜಿಸಿರುವ ಸರಣಿ ಉಪನ್ಯಾಸ ಕಾಯ೯ಕ್ರಮದ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ರವಿ ಎಸ್. ಕೋಟೆಣ್ಣವರ, ಸ್ವಸ್ಥ, ಸಮರ್ಥ್ಯ, ಸದೃಡ ಆರೋಗ್ಯಕ್ಕಾಗಿ ಆಯುಷ್ ಪದ್ದತಿ ಉಪಯುಕ್ತವಾಗಿದೆ. ದಿನನಿತ್ಯದ ಆರೋಗ್ಯ ಸಮಸ್ಯೆಗಳಿಗೆ ಆಯುಷ್ ಪದ್ದತಿಯಲ್ಲಿ ಪರಿಹಾರವಿದೆ. ಈ ಪದ್ಧತಿಗಳನ್ನು ಅಳವಡಿಸಿಕೊಂಡು ಆರೋಗ್ಯವಂತರಾಗಿ […]