ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ. ಎಂ. ಎಸ್. ಮಧಬಾವಿ ಹೇಳಿದ್ದಾರೆ.
ವಿಜಯಪುರ ನಗರದಲ್ಲಿ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ. ಸಂಗನ ಬಸವ ಕಾಲೇಜ್ ಆಫ್ ಫಾರ್ಮಸಿ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಾತನಾಡಿದರು.
ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಘಟನೆಗಳನ್ನು ಶಿಕ್ಷಕರು ಮಕ್ಕಳಿಗೆ ಪಾತ್ರಗಳ ಮೂಲಕ ಅವರ ಮನವರಿಕೆ ಮಾಡಿ ಕೊಡಬೇಕು. ಅಲ್ಲದೇ ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ ನಡೆದ ಪ್ರಮುಖ ಘಟನೆಗಳನ್ನು ಓದಿದರೆ ವ್ಯಕ್ತಿತ್ವದ ಬೆಳೆವಣಿಗೆಗೆ ಸಹಕಾರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಎಂ. ಎಸ್. ಮಾಧಬಾವಿ ಕನ್ನಡದಲ್ಲಿ ಹಾಗೂ ಸಂಸ್ಥೆಯ ಕಾನೂನು ಸಲಹೆಗಾರ ಸುರೇಶ ಹಕ್ಕಿ ಇಂಗ್ಲಿಷ್‍ನಲ್ಲಿ ಪ್ರತಿಜ್ಞೆಯನ್ನು ಬೋಧಿಸಿದರು.
ಕಾಲೇಜು ವತಿಯಿಂದ 75 ನಾನಾ ಕಾರ್ಯಕ್ರಮಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಎಲ್‍ಡಿಇ ಸಂಸ್ಥೆಯ ಹಣಕಾಸು ಅಧಿಕಾರಿ ದೇವೆಂದ್ರ ಅಗರವಾಲ, ಪ್ರಾಚಾರ್ಯ ಡಾ. ಆರ್. ಬಿ. ಕೊಟ್ನಾಳ, ಎಂ. ಎಸ್. ಬಿರಾದಾರ, ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.