ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಸೂಚನೆ
ಬೆಂಗಳೂರು: ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ನೀಡಿದ್ದಾರೆ. ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ ಮತ್ತು ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಬೇಕು ಎಂದು ಅವರು ಇಂದು […]
ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ- ಅಮಿತ ಶಾ ವಿಶ್ವಾಸ
ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತದಲ್ಲಿ, ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದು, ಅವರ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ತಮಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ. ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ನಾನಾ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚೆಗೆ ಕರ್ನಾಟಕದ ನೇತೃತ್ವವನ್ನು ಬೇರೆಯವರಿಗೆ ವಹಿಸುವ ಕುರಿತು ಯಡಿಯೂರಪ್ಪಜೀ ಅವರು ಸ್ವತಃ ತೀರ್ಮಾನ ಕೈಗೊಂಡರು. ಬಿಜೆಪಿಯು ಬಸವರಾಜ ಬೊಮ್ಮಾಯಿ ಅವರಿಗೆ ನೂತನ ಮುಖ್ಯಮಂತ್ರಿಯ ಜವಾಬ್ದಾರಿ […]
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿಯ ವಿವಾಹದಲ್ಲಿ ಪಾಲ್ಗೋಂಡ ಕೇಂದ್ರ ಗೃಹ ಸಚಿವ ಅಮಿತ ಶಾ
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ದಾವಣಗೆರೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಅವರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೋಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದಿರಾ ಕ್ಯಾಂಟೀನ್ ನಿರ್ವಹಣೆ ಕಂಪನಿಗೆ ಪ್ರತಿಷ್ಠಿತ ಶೆಫ್‌ಟಾಕ್ ರಾಷ್ಟ್ರೀಯ ಪ್ರಶಸ್ತಿ
ನವದೆಹಲಿ: ದಕ್ಷಿಣ ಭಾರತದ ಪ್ರತಿಷ್ಠಿತ ಶೆಫ್‌ಟಾಕ್ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ಇದೀಗ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯ ಲಭಿಸಿದೆ. ದೆಹಲಿಯಲ್ಲಿ ಕರುನಾಡಿನ ಕಾರ್ಮಿಕರತ್ನ ಖ್ಯಾತಿಯ ಉದ್ಯಮಿ ChefTalk ಕಂಪನಿಯ ಮುಖ್ಯಸ್ಥ ಗೋವಿಂದ ಬಾಬು ಪೂಜಾರಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ನಾನಾ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟಕ್ಕಾಗಿ ನೀಡಲಾಗುವ ಪ್ರಶಸ್ತಿ ಇದಾಗಿದ್ದು, ಪ್ರತೀ ವರ್ಷ ರಾಷ್ಟ್ರೀಯ ಮಟ್ಟದಲ್ಲಿ ಕ್ವಾಲಿಟಿ ಫುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್’ ನೀಡಲಾಗುತ್ತಿದೆ. ಈ ಬಾರಿ ಈ ಪ್ರಶಸ್ತಿ ಬೆಂಗಳೂರು ಪಾಲಾಗಿದೆ. ಇಂಟರ್ ನ್ಯಾಷನಲ್ ಅಚೀವರ್ಸ್ ಕಾನ್ಫರೆನ್ಸ್ ಮೂಲಕ […]
ಹಸೆಮಣೆ ಏರಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿ- ಶುಭ ಕೋರಿದ ಸಿಎಂ, ಗಣ್ಯರು
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪುತ್ರಿ ಅರ್ಪಿತಾ ಅವರು ಹೃಷಿಕೇಶ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾನಾ ಗಣ್ಯರು ನವದಂಪತಿಗೆ ಶುಭ ಕೋರಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೋಂಡ ಸಿಎಂ ಬಸವರಾಜ ಬೊಮ್ಮಾಯಿ ಅವರು ನೂತನ ದಂಪತಿಗೆ ಶುಭ ಕೋರಿದರು. ರಾಜ್ಯಪಾಲ ಧಾವರಚಂದ ಗೆಹ್ಲೋಟ್ ಕೂಡ ನೂತನ ದಂಪತಿಗೆ ಶುಭ ಕೋರಿದರು. ಕಂದಾಯ ಸಚಿವ ಆರ್. ಅಶೋಕ ಕೂಡ ಹುಬ್ಬಳ್ಳಿಗೆ ಆಗಮಿಸಿ ನವ ದಂಪತಿಗೆ […]
ರಾಜ್ಯದ ಆಂತರಿಕ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ದಾವಣಗೆರೆ: ರಾಜ್ಯದ ಆಂತರಿಕ ಸುರಕ್ಷತೆಯನ್ನು ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯ ಜಿ ಎಂ ಐ ಟಿ ಆವರಣದಲ್ಲಿ ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಜಿ ಎಂ ಐ ಟಿ ಕೇಂದ್ರ ಗ್ರಂಥಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕ ತನ್ನ ಪಾತ್ರವನ್ನು ವಹಿಸಬೇಕಾಗಿದೆ. ಭಯೋತ್ಪಾದಕರು ದಕ್ಷಿಣ ಭಾರತದಲ್ಲಿ ತಮ್ಮ ಬೇರುಗಳನ್ನು ಬಿಡಲು ಪ್ರಯತ್ನಿಸಿದಾಗ ನಾವು ಅವರನ್ನು ಸದೆ […]
ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರ ಜನ್ಮದಿನದ ಕೇಕ್ ಕತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಗದಗ: ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿದ್ಯಾರ್ಥಿನಿಯರ ಆಗ್ರಹಕ್ಕೆ ಪ್ರೀತಿಯಿಂದಲೇ ಸ್ಪಂದಿಸಿದ ಘಟನೆ ಗದಗ ನಗರದಲ್ಲಿ ನಡೆಯಿತು. ಗದಗದ ನಗರದಲ್ಲಿರುವ ಮೆಟ್ರಿಕ್ ನಂತರ ಬಾಲಕಿಯರ ಸರಕಾರಿ ವಸತಿ ನಿಲಯಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರ ಅಪೇಕ್ಷೆ ಮೇರೆಗೆ ವಸತಿ ನಿಲಯದ ಇಬ್ಬರು ವಿದ್ಯಾರ್ಥಿನಿಯರ ಹುಟ್ಟುಹಬ್ಬದ ಕೇಕ್ ಕಟ್ ಮಾಡುವ ಮೂಲಕ ಸಚಿವರು ವಿದ್ಯಾರ್ಥಿನಿಯರ ಸಂಭ್ರಮವನ್ನು ಹೆಚ್ಚಿಸಿದರು. ನಂತರ ಮಾತನಾಡಿದ ಸಚಿವರು, ಗಣೇಶ ಚತುರ್ಥಿ ಆಚರಿಸಲಿದ್ದೇವೆ. ಕೋವಿಡ್ […]
ಜನ್ಮಕೊಟ್ಟ ಪುಣ್ಯಭೂಮಿಯ ಋಣವನ್ನು ತೀರಿಸುವ ಕೆಲಸ ಮಾಡುವೆ- ಸಚಿವ ಗೋವಿಂದ ಕಾರಜೋಳ
ವಿಜಯಪುರ: ನನಗೆ ಜನ್ಮಕೊಟ್ಟಂಥ ಪುಣ್ಣಭೂಮಿಯ ಋಣವನ್ನು ತೀರಿಸುವ ಕೆಲಸವನ್ನು ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಬುರಣಾಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ನನ್ನ ಜನ್ಮಭೂಮಿ. ನಾನು ಯಾವುದೇ ಇಲಾಖೆಯಲ್ಲಿರಲಿ ಜನ್ಮ ನೀಡಿದ ಪುಣ್ಯ ಭೂಮಿಯ ಋಣ ತೀರಿಸುವ ಕೆಲಸ ಮಾಡುತ್ತೇನೆ. ಇಲ್ಲಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಯಾವುದೇ ಲಾಭ ಅಥವಾ ನಷ್ಟದ ದೃಷ್ಠಿ ಇಟ್ಟುಕೊಂಡು ನೋಡುವುದಿಲ್ಲ. ವಿಜಯಪುರ ಐತಿಹಾಸಿಕ ನಗರ. ಇಲ್ಲಿ […]
ರಾತ್ರಿವೇಳೆ ಮನೆಬಿಟ್ಟು ಹೊರಗೋಡಿ ಬಂದ ಗ್ರಾಮಸ್ಥರು- ಎಲ್ಲಿ, ಯಾಕೆ ಗೊತ್ತಾ?
ವಿಜಯಪುರ: ಅವರೆಲ್ಲ ರಾತ್ರಿವೇಳೆ ನಿಶ್ಚಿಂತೆಯಿಂದ ಮಲಗುತ್ತಿದ್ದರು. ಆದರೆ, ಆ ಒಂದು ಘಟನೆ ಅವರು ಮನೆಯಿಂದ ಹೊರಗೆ ಓಡಿ ಬರುವಂತೆ ಮಾಡಿದೆ. ಆಗ ಎಲ್ಲರೂ ಒಬ್ಬರ ಮುಖವನ್ನೊಬ್ಬರು ನೋಡಿ ತಂತಮ್ಮ ಆತಂಕದ ಕ್ಷಣಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ರಾತ್ರಿಯಿಡೀ ಮನೆಯ ಹೊರಗಡೆಯೇ ಜಾಗರಣೆ ಮಾಡಿ ಆತಂಕದಲ್ಲಿಯೇ ಕಾಲ ಕಳೆದಿದ್ದಾರೆ. ಅಂದಹಾಗೆ, ಈ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ, ಕರಭಂಟನಾಳ ಹಾಗೂ ಇತರ ಗ್ರಾಮಗಳಲ್ಲಿ. ಎಂದಿನಂತೆ ಇವರು ರಾತ್ರಿವೇಳೆ ಆರಾಮಾಗಿ […]
ರಾಷ್ಟ್ರೀಯ ಹೆದ್ದಾರಿ ವಿಭಾಗದ ರೇಲ್ವೆ ಮೇಲಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ರಮೇಶ ಜಿಗಜಿಣಗಿ ಖಡಕ್ ಸೂಚನೆ
ವಿಜಯಪುರ: ರಾಷ್ಟ್ರೀಯ ಹೆದ್ದಾರಿ ವಿಭಾಗದ ರೇಲ್ವೆ ಮೇಲ್ಸೆತುವೆ ಕಾಮಗಾರಿಯನ್ನು 24 ತಿಂಗಳೊಳಗಾಗಿ ಪೂರ್ಣ ಗೊಳಿಸುವಂತೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಈ ಕಾಮಗಾರಿಯಡಿ ನಂ. 218 ಕಿ. ಮೀ. 15.00 ರಲ್ಲಿ ರೇಲ್ವೆ ಮೇಲ್ಸೇತುವೆ ರಸ್ತೆಯ ಉದ್ದ 1.51 ಕಿ. ಮೀ. ಇದ್ದು, ಅಂದಾಜು ರೂ. 58.13 ಕೋ. ರೂ […]