ವಿಜಯಪುರ: ರಾಷ್ಟ್ರೀಯ ಹೆದ್ದಾರಿ ವಿಭಾಗದ ರೇಲ್ವೆ ಮೇಲ್ಸೆತುವೆ ಕಾಮಗಾರಿಯನ್ನು 24 ತಿಂಗಳೊಳಗಾಗಿ ಪೂರ್ಣ ಗೊಳಿಸುವಂತೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಈ ಕಾಮಗಾರಿಯಡಿ ನಂ. 218 ಕಿ. ಮೀ. 15.00 ರಲ್ಲಿ ರೇಲ್ವೆ ಮೇಲ್ಸೇತುವೆ ರಸ್ತೆಯ ಉದ್ದ 1.51 ಕಿ. ಮೀ. ಇದ್ದು, ಅಂದಾಜು ರೂ. 58.13 ಕೋ. ರೂ ವೆಚ್ಚದ ಯೋಜನೆಯಾಗಿದ್ದು, ಈಗ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.
ರೇಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ತ್ವರಿತವಾಗಿ, ಗುಣಮಟ್ಟದಲ್ಲಿ ನಿಗದಿತ ಅವಧಿ ಒಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕೋವಿಡ್ ಕಾರಣದಿಂದ ವಿಳಂಬವಾಗಿದ್ದ ರಾಷ್ಟ್ರೀಯ ಹೆದ್ದಾರಿ ಬಾಕಿ ಕಾಮಗಾರಿಗಳನ್ನು ಕೂಡ ಶೀಘ್ರ ಮುಗಿಸಲು ಕ್ರಮಕೈಗೊಳ್ಳಬೇಕು ಎಂದು ಸಂದದ ರಮೇಶ ಜಿಗಜಿಣಗಿ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಕಾರ್ಯ ನಿರ್ವಾಹಕ ಅಭಿಯಂತರ ಅರುಣಕುಮಾರ ಪಾಟೀಲ, ಎ. ಎಂ. ಕೊಕರೆ, ವಿವೇಕ ಮಠ, ವಿಜಯ ಜೋಶಿ, ವಿಠ್ಠಲ ನಡುವಿನಕೇರಿ, ವಿಠ್ಠಲ ಕೆರಸೂರ ಇತರರು ಉಪಸ್ಥಿತರಿದ್ದರು.