ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣೆ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 60ನೇ ವರ್ಷದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು […]

ಬಸವ ನಾಡಿನಲ್ಲಿ ಸೆ.6 ರಿಂದ ರಾಷ್ಟ್ರೀಯ ಕಂದುರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸೆ. 6 ರಿಂದ ರಾಷ್ಟ್ರೀಯ ಕಂದುರೋಗ ನಿಯಂತ್ರಣ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಪ್ರಾಣೇಶ ಜಹಾಗೀರದಾರ ತಿಳಿಸಿದ್ದಾರೆ. ಈ ಕಂದುರೋಗ ಜಾನುವಾರುಗಳಿಗೆ ಮಾರಕವಾಗಿದ್ದು, ಸಾಂಸರ್ಗಿಕ ರೋಗವಾಗಿದೆ. ಈ ರೋಗವು ಹಸು, ಎಮ್ಮೆ,, ಕುರಿ, ಮೇಕೆ, ಹಂದಿ, ನಾಯಿ, ಒಂಟೆ ಮತ್ತು ಕುದುರೆ ಮುಂತಾದ ಪ್ರಾಣಿಗಳಲ್ಲಿ ಕಂಡು ಬರುತ್ತದೆ. ರೋಗ ಪೀಡಿತ ಜಾನುವಾರುಗಳ ಸಂಪರ್ಕದಿಂದ […]

ಮುಂದಿನ ಚುನಾವಣೆ ಬಳಿಕ ನಾವೆಲ್ಲ ಒಗ್ಗೂಡಿ ಮುಂದುವರೆಯುತ್ತೇವೆ- ಶಾಸಕ ಎಂ. ಬಿ. ಪಾಟೀಲ ಹೀಗೆ ಹೇಳಿದ್ದು ಯಾವ ವಿಷಯಕ್ಕೆ ಗೊತ್ತಾ?

ಬೆಂಗಗಳೂರು: ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಆದರೆ, ಈ ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಅವರು ಇತ್ತೀಚಿಗೆ ಬೆಂಗಳೂರಿನಲ್ಲಿ ತಾವು ನೀಡಿರುವ ಹೇಳಿಕೆಯ ವಿಡಿಯೋವನ್ನು ಪತ್ರಕರ್ತರಿಗೆ ತೋರಿಸಿ ನಂತರ ಮಾತನಾಡಿದರು. ಈ ಹಿಂದೆ ನಾವು ವೀರಶೈವ ಒಳಗೊಂಡಂತೆ 99 ಉಪಪಂಗಡಗಳನ್ನು ಸೇರಿಸಿ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಕೇಳಿದ್ದೇವು. ಮುಂದಿನ ಚುನಾವಣೆ ನಂತರ ನಾವೇಲ್ಲ ಒಗ್ಗೂಡಿ ಮುನ್ನೆಡೆಯುತ್ತೇವೆ ಎಂದು ಇತ್ತೀಚೆಗೆ ಹೇಳಿದ್ದೆ. ಇಲ್ಲಿ ಹೋರಾಟ, ಕೂಗು, ಪ್ರತ್ಯೇಕ ಈ ಶಬ್ದಗಳನ್ನು […]

ಕೊರೊನಾ ಸೋಂಕಿನ ವಿರುದ್ಧ ಹೊರಾಟದಲ್ಲಿ ಬಹುತೇಕ ಜಯದ ಹೊಸ್ತಿಲಲ್ಲಿದ್ದೇವೆ- ಅಮಿತ್ ಶಾ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಪಂಚದಲ್ಲಿಯೇ ಕೊರೊನಾವನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದೇವೆ. ಕೊರೊನಾ ಸೋಂಕಿನ ವಿರುದ್ಧ ಹೊರಾಟದಲ್ಲಿ ಬಹುತೇಕ ಜಯದ ಹೊಸ್ತಿಲಲ್ಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ ಮತ್ತು ಮಾನವಕುಲಕ್ಕೆ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಸರಕಾರಕ್ಕೆ ಶಹಬ್ಬಾಶಗಿರಿ ನೀಡಿದರು. ಕೊರೊನಾ ನಿರ್ಹವಣೆಗೆ ರಾಜ್ಯ […]

ಪದ್ಮಶ್ರೀ ಕಾಕಾ ಕಾರ್ಖಾನಿಸ ಪ್ರೌಢಶಾಲೆ ನಿರ್ಮಾಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಶಂಕುಸ್ಥಾಪನೆ

ವಿಜಯಪುರ: ಪದ್ಮಶ್ರೀ ಕಾಕಾ ಕಾರ್ಖಾನಿಸ್ ಪ್ರೌಢಶಾಲೆ ನಿರ್ಮಿಸುವ ಕಾರ್ಯವನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಚಟುವಟಿಕೆಗಳು ಪ್ರಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಜಲಸಂಪನ್ಮೂುಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ನೀಡಿದ್ದಾರೆ. ವಿಜಯಪುರ ನಗರದಲ್ಲಿರುವ ಪದ್ಮಶ್ರೀ ಕಾಕಾ ಕಾರ್ ಖಾನಿಸ್ ಪ್ರೌಢಶಾಲೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, 2020-21ನೇ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯ ಅಡಿಯಲ್ಲಿ ರೂ. 10 ಕೋ. ಮಂಜೂರಾಗಿದ್ದು, ಈ ಅನುದಾನದಲ್ಲಿ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ದೈಹಿಕ ಶಿಕ್ಷಣ […]