ಭೂಪಂಕ, ಅದರ ವಲಯಗಳು, ತೀವ್ರತೆಯ ಪರಿಣಾಮಗಳು, ಆಗುವ ಹಾನಿಯ ಬಗ್ಗೆ ನಿಮಗೆಷ್ಟು ಗೊತ್ತು?

ವಿಜಯಪುರ: ಶನಿವಾರ ವಿಜಯಪುರ ಜಿಲ್ಲೆಯಲ್ಲಿ ಉಂಟಾದ 3.9 ತೀವ್ರತೆಯ ಭೂಕಂಪನ ಜನರನ್ನು ಆತಂಕಕ್ಕೆ ತಳ್ಳಿದೆ. ಮಧ್ಯ ರಾತ್ರಿ ವೇಳೆಗೆ ಉಂಟಾದ ಈ ಭೂಂಕಪನದಿಂದಾಗಿ ಜನತೆ ರಾತ್ರಿ ಜಿಟಿಜಿಟಿ ಮಳೆಯ ನಡುವೆಯೂ ಬೆವರುವಂತೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ವಿಜಯಪುರ ಜಿಲ್ಲಾಡಳಿತ ಮಹಾರಾಷ್ಟ್ರದ ಕೊಲ್ಹಾಪುರ ಈ ಭೂಕಂಪದ ಕೇಂದ್ರ ಬಿಂದುವಾಗಿದ್ದು, ರಿಟ್ಚರ್ ಮಾಪಕದಲ್ಲಿ 3.9 ರಷ್ಟು ತೀವ್ರತೆ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಭೂಕಂಪ, ಅದರ ವಲಯಗಳು, ತೀವ್ರತೆಯ ಪರಿಣಾಮಗಳು, ಆಗುವ ಹಾನಿಯ ಮಾಹಿತಿ ಇಲ್ಲಿದೆ    […]

ವಿಜಯಪುರದಲ್ಲಿ ಭೂಕಂಪ ವಿಚಾರ-ಆತಂಕ ಬೇಡ ಎಂದ ಡಿಸಿ- ತುರ್ತು ಸಭೆ ನಡೆಸಿದ ಎಡಿಸಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ವೇಲೆಯಲ್ಲಿ ಸಂಭವಿಸಿದ ಭೂಕಂಪ ವಲಯ-2ರಲ್ಲಿ ಬರುತ್ತಿದ್ದು, ಇದು ಕಡಿಮೆ ಅಪಾಯ ಇರುವ ವಲಯವಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ಕುರಿತು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಮತ್ತು ಭಯಪಡಬಾರದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶನಿವಾರ ತಡರಾತ್ರಿ 11.47 ರಿಂದ 11.49ರ ಅವಧಿಯಲ್ಲಿ ವಿಜಯಪುರ ಜಿಲ್ಲೆಯ ವಿಜಯಪುರ, ಬಬಲೇಶ್ವರ, ತಿಕೋಟಾ, ಬಸವನ […]

ಮಕ್ಕಳ ಜೀವನ ರೂಪಿಸುವಲ್ಲಿ ಶಿಕ್ಷಕರದು ಬಹಳ ಪ್ರಮುಖ ಪಾತ್ರ: ವಿಜಯಪುರ ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ

ವಿಜಯಪುರ: ತಂದೆ-ತಾಯಿಯ ನಂತರ ಮಕ್ಕಳ ಜೀವನ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಹೇಳಿದ್ದಾರೆ. ವಿಜಯಪುರ ನಗರದ ಶ್ರೀ. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನಸ್ಸಿಟ್ಟು ಪಾಠ ಮಾಡುವ ಶಿಕ್ಷಕರು ವಿದ್ಯಾರ್ಥಿಯ ಮನಸ್ಸಿನಲ್ಲಿ ಸದಾ ಇರುತ್ತಾರೆ. […]

ಸಾರ್ವಜನಿಕ ಗಣೇಶೋತ್ಸವಕ್ಕೆ 17 ಷರತ್ತುಗಳೊಂದಿಗೆ ಅನುಮತಿ ನೀಡಿದ ಸರಕಾರ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಒತ್ತಡದ ಹಿನ್ನೆಲೆಯಲ್ಲಿ ಸರಕಾರ ಕೊನೆಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನಿಬಂಧನೆಗಳೊಂದಿಗೆ ಅನುಮತಿ ನೀಡಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು. ಈ ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ, ಶಿಕ್ಷಣ ಸಚಿವ ಬಿ. ಸಿ. ನಾಗೇಶ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಅಪರ […]

ವಿಜಯಪುರದಲ್ಲಿ ಮಧ್ಯರಾತ್ರಿ ವೇಳೆಗೆ ಭೂಕಂಪನ- ರಿಕ್ಚರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ- ಮಹಾರಾಷ್ಟ್ರದ ಕೊಲ್ಹಾಪುರ ಕೇಂದ್ರ ಬಿಂದು

ವಿಜಯಪುರ: ವಿಜಯಪುರದಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಶನಿವಾರ ಮಧ್ಯಾರಾತ್ರಿ ವೇಳೆಗೆ ಭೂಕಂಪನ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಹಾಪುರ ಈ ಭೂಕಂಪನನದ ಕೇಂದ್ರ ಬಿಂದುವಾಗಿದ್ದು, ಅಲ್ಲಿ ರಿಕ್ಚರ್ ಮಾಪಮಕದಲ್ಲಿ 3.9 ತೀವ್ರತೆಯ ಕಂಪನ ದಾಖಲಾಗಿದೆ. ಶನಿವಾರ ರಾತ್ರಿ 11.51ರ ಸುಮಾರಿಗೆ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವಿಜಯಪುರ ನಗರದ ನಾನಾ ಬಡವಾಣೆಗಳ ಜನರು ತಿಳಿಸಿದ್ದಾರೆ. ರಾತ್ರಿ 11.51ರ ಸುಮಾರಿಗೆ ಶಬ್ದ ಕೇಳಿ ಬಂದಿದೆ. ನಂತರ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಆತಂಕಗೊಂಡ ಜನತೆ ಮನೆಯಿಂದ ಹೊರಗೆ ಓಡಿ […]