ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಒತ್ತಡದ ಹಿನ್ನೆಲೆಯಲ್ಲಿ ಸರಕಾರ ಕೊನೆಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನಿಬಂಧನೆಗಳೊಂದಿಗೆ ಅನುಮತಿ ನೀಡಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು.
ಈ ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ, ಶಿಕ್ಷಣ ಸಚಿವ ಬಿ. ಸಿ. ನಾಗೇಶ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಭೆಯ ಬಳಿಕ ಸರಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದರೆ, 17 ಷರತ್ತುಗಳನ್ನು ವಿಧಿಸಿದೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸರಕಾರ ವಿಧಿಸಿರುವ 17 ಷರತ್ತುಗಳು ಇಂತಿವೆ.
1. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಂತಮ್ಮ ಮನೆಗಳಲ್ಲಿ ಅಥವಾ ಸರಕಾರಿ ಅಥವಾ ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಸಂಖ್ಯೆಯೊಂದಿಗೆ ಆಚರಿಸುವುದು
1. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸಾರ್ಜಜನಿಕರು ತಂತಮ್ಮ ಮನೆಗಳು, ಸರಕಾರಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಸಂಖ್ಯೆ ಜನರ ಸಮ್ಮುಖದಲ್ಲಿ ಆಚರಿಸಬೇಕು.
2. ಸಾರ್ವಜನಿಕವಾಗಿ ಸ್ಥಾಪಿಸಲಾಗುವ ಗಣೇಶ ಮೂರ್ತಿ ಗರಿಷ್ಠ ನಾಲ್ಕು ಅಡಿ ಎತ್ತರ ಮೀರಬಾರದು. ಮನೆಯಲ್ಲಿ ಕೂಡಿಸಲಾಗುವ ಮೂರ್ತಿ ಗರಿಷ್ಠ ಎರಡು ಅಡಿ ಮೀರಬಾರದು.
3. ಗಣೇಶೋತ್ಸವ ಸಮಿತಿ ಮತ್ತು ಮಂಡಳಿಗಳು ಮಹಾನಗರ ಪಾಲಿಕೆ, ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯಬೇಕು. ವಾರ್ಡಿಗೊಂದರಂತೆ ಮಾತ್ರ ಸಾರ್ವಜನಿಕ ಗಣೇಶ ಮೂರ್ತಿ ಕೂಡಿಸಲು ಅವಕಾಶವಿದೆ. ಐದು ದಿನಗಳಿಗಿಂತ ಹೆಚ್ಚು ಈ ಮೂರ್ತಿಗಳನ್ನು ಕೂಡಿಸುವಂತಿಲ್ಲ.
4. ಇಂತಹ ಸ್ಥಳಗಳಲ್ಲಿ 20 ಜನ ಸೇರಲು ಅವಕಾಶವಿರುವ ಆವರಣವನ್ನು ನಿರ್ಮಿಸುವುದು. 20ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.
5. ಗಣೇಶೋತ್ಸವ ನಡೆಸುವ ಆಯೋಜಕರು ಕೋವಿಡ್-19 ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
6. ಗಣೇಶೋತ್ಸವ ಆಚರಣೆ ನಡೆಸುವ ಸ್ಥಳಗಳಲ್ಲಿ ಸಂಘಟಕರು ಸ್ಥಳೀಯ ಮಟ್ಟದಲ್ಲಿ ಕೊರೊನಾ ಲಸಿಕೆ ಕಾರ್ಯಕ್ರಮವನ್ನು ಆಯೋಜಿಸಬೇಕು.
7. ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿಯಾಗದಂತೆ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು.
8. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಳದಲ್ಲಿ ಗಣೇಶ ಮೂರ್ತಿಗಳನ್ನು ತರುವಾಗ ಮತ್ತು ವಿಸರ್ಜಿಸುವಾಗ ಹಾಗೂ ಉಳಿದ ಸಂದರ್ಭದಲ್ಲಿ ಮೆರವಣಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
7. ಮನೆ ಮತ್ತು ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿಗಳನ್ನು ಸಮೀಪದ ಮತ್ತು ನಿಗದಿತ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು. ಈ ಸಂದರ್ಭದಲ್ಲಿ ಕನಿಷ್ಠ ಜನರಿರಬೇಕು.
8. ಗಣೇಶೋತ್ಸವ ನಡೆಯುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಮತ್ತು ಮುಖ್ಯವಾಗಿ ಡಿಜೆ ಹಾಗೂ ಇನ್ನಿತರ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
9. ಗಣೇಶ ಮೂರ್ತಿಗಳನ್ನು ತರುವಾಗ ಮತ್ತು ವಿಸರ್ಜಿಸುವಗಾ ಹಾಗೂ ಇನ್ನುಳಿದ ದಿನ ಮೆರವಣಿಗೆ ಮಾಡುವದನ್ನು ನಿಷೇಧಿಸಲಾಗಿದೆ.
10. ಸಾರ್ವಜನಿಕವಾಗಿ ಮತ್ತು ಮನೆಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳನ್ನು ವಿಸರ್ಜಿಸುವಾಗ ಅತೀ ಕನಿಷ್ಠ ಜನರಿರಬೇಕು ಮತ್ತು ಸಮೀಪದ ಮಾರ್ಗಗಳ ಮೂಲಕ ತೆರಳಿ ನಿಗದಿತ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು.
11. ಸಾರ್ವಜನಿಕ ಗಣೇಶ ಸ್ಥಳಗಳಲ್ಲಿ ಪ್ರತಿದಿನ ಸ್ಯಾನಿಟೈಸೇಷನ್ ಮಾಡಬೇಕು. ದರ್ಶನಕ್ಕೆ ಬರುವ ಭಕ್ತರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು.
12. ಸಾರ್ವಜನಿಕ ಗಣೇಶೋತ್ಸವ ಸ್ಥಳಗಳಲ್ಲಿ ಆರು ಅಡಿ ಸಾಮಾಜಿಕ ಅಂತರ ಕಾಪಾಡಲು ಗುರುತುಗಳನ್ನು ಹಾಕಿ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು.
13. ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು.
14. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರಕಾರ, ಆರೋಗ್ಯ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆಗಳು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
15. ಶ್ರೀ ಗಣೇಶೋತ್ಸವ ಆಚರಣೆ ಸಂದರ್ಭಕ್ಕೆ ಅನುಗುಣವಾಗಿ ಸರಕಾರ, ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ, ಪ್ರಾಧಿಕಾರ, ಹೊರಡಿಸುವ ಆದೇಶ ಮತ್ತು ನಿರ್ದೇಶಗಳನ್ನೂ ಕೂಡ ಕಡ್ಡಾಯವಾಗಿ ಪಾಲಿಸಬೇಕು.
16. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀಗಣೇಶೋತ್ಸವ ಹಬ್ಬವನ್ನು ಅದೇ ರೀತಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು.
17. ಕೇಂದ್ರ ಮತ್ತು ರಾಜ್ಯ ಸರಕಾರದ ಆದೇಶ ಮತ್ತು ನಿರ್ದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಈ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಂಘಗಳು, ಸಮಿತಿಗಳು ಮತ್ತು ಮಂಡಳಿಗಳೂ ಕೂಡ ಸರಕಾರದ ನಿಯಮಗಳನ್ನು ಪಾಲಿಸುವ ಮೂಲಕ ುತ್ಸವದ ಮೆರಗನ್ನು ಹೆಚ್ಚಿಸಬೇಕಿದೆ.