ಬಸವ ನಾಡಿನಲ್ಲಿ 6 ರಿಂದ 8ನೇ ತರಗತಿ ಶಾಲೆಗಳು ಆರಂಭ- ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ
ವಿಜಯಪುರ: ರಾಜ್ಯಾದ್ಯಂತ ಇಂದಿನಿಂದ 6 ರಿಂದ 8 ನೇ ತರಗತಿ ಶಾಲೆಗಳು ಆರಂಭವಾಗಿದ್ದು, ಗುಮ್ಮಟ ನಗರಿ ವಿಜಯಪುರದಲ್ಲಿಯೂ ತರಗತಿಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ಕೂಡ ಶಾಲೆಗೆ ಆಗಮಿಸುತ್ತಿದ್ದಾರೆ. ಕೊರೊನಾ ಭೀತಿಯ ಆತಂಕದಲ್ಲಿಯೃ ಮಕ್ಕಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ. ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ಸೈನಿಟೇಶನ್ ಹಾಕುವ ಜೊತೆಗೆ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿ ಪ್ರಾರಂಭ ಮಾಡಲಾಗಿದೆ. ಒಂದು ಬೇಂಚಿನಲ್ಲಿ ಒಬ್ಬರು ಇಲ್ಲವೇ ಇಬ್ಬರು ವಿದ್ಯಾರ್ಥಿಗಳನ್ನು ಕೂಡಿಸಿ ಪಾಠ ಮಾಡಲಾಗುತ್ತಿದೆ. ಒಂದು ತರಗತಿಯಲ್ಲಿ ಶೇ. 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ […]
ಬೊಮ್ಮಾಯಿ, ನಾನು ಬಿಜೆಪಿಗೆ ಬರದಿದ್ದರೆ 2004 ರಲ್ಲಿ ಯಡಿಯೂರಪ್ಪ ಸಿಎಂ ಆಗುತ್ತಿರಲಿಲ್ಲ- ಬಿಜೆಪಿ ನಾಯಕರಿಗೆ ನೇರವಾಗಿ, ಖಾರವಾಗಿ ಎಚ್ಚರಿಕೆ ನೀಡಿದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಬಸವರಾಜ ಬೊಮ್ಮಾಯಿ ಮತ್ತು ತಾವು 2004ರಲ್ಲಿ ಜನತಾ ದಳ ಬಿಟ್ಟು ಬಿಜೆಪಿಗೆ ಬರದಿದ್ದರೆ ಅಂದು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿರುವ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಹೇಳಿದ್ದಾರೆ. ಆದರೆ, ಇದಕ್ಕೆ ಬಿಜೆಪಿಯ ಕೆಲವು ಜನ ನಾಯಕರು […]
ಗಣೇಶ ಚತುರ್ಥಿ ಆಚರಣೆಗೆ ಏಳು ದಿನ ಕಾಲಾವಕಾಶ ನೀಡಿ, ಮೆರವಣಿಗೆ ನಡೆಸಲು ಬಿಡಿ- ಇಲ್ಲದಿದ್ದರೆ ತಾಲಿಬಾನ್ ರೀತಿ ವರ್ತಿಸಿದಂತಾಗುತ್ತದೆ- ಶಾಸಕ ಯತ್ನಾಳ ವಾಗ್ದಾಳಿ
ವಿಜಯಪುರ: ಗಣೇಶೋತ್ಸವ ಆಚರಣೆಗೆ ಸರಕಾರ ವಿಧಿಸಿರುವ ಷರತ್ತುಗಳ ಬಗ್ಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಗಣೇಶ ಚತುರ್ಥಿ ಆಚರಣೆಗೆ ಸರಕಾರ ಅವಕಾಶ ನೀಡಿರುವುದು ಸಮಾಧಾನ ತಂದಿಲ್ಲ. ನಮ್ಮ ಹೋರಾಟದ ಫಲವಾಗಿ ಶೇ. 50ರಷ್ಟು ಈ ವಿಚಾರದಲ್ಲಿ ಗೆದ್ದಿದ್ದೇವೆ. ಐದು ದಿನಗಳ ಬದಲು ಏಳು ದಿನಗಳ ಕಾಲ ಅವಕಾಶ ನೀಡಬೇಕಿತ್ತು. ಮೆರವಣಿಗೆಗೆ ಅವಕಾಶ ಕೊಡಬೇಕಿತ್ತು. ಅಲ್ಲದೇ, ಪ್ರತಿ ವಾರ್ಡಿಗೆ ಕೇವಲ ಒಂದು ಗಣೇಶ ಮೂರ್ತಿ ಪ್ರತಿಷ್ಠಾಪನೆ […]
ಈ ವರ್ಷ 5 ಸಾವಿರ ಶಿಕ್ಷಕರ ನೇಮಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಈ ವರ್ಷದಲ್ಲಿ 5000 ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಈ ಸಮಾರಂಭದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಅವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 5000 ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದರು. 21ನೇ ಶತಮಾನ ಜ್ಞಾನದ […]
ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಜೊಲ್ಲೆ ದಂಪತಿ-ಮಠಾಧೀಶರ ಮಾರ್ಗದರ್ಶನದಲ್ಲಿ ನಡೆಯುವೆ- ಶಶಿಕಲಾ ಜೊಲ್ಲೆ
ಬೆಂಗಳೂರು: ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಿಜೆಪಿ ಲೋಕಸಭೆ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ದಂಪತಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಗುರುವಂದನೆ ಸಲ್ಲಿಸಿ ಬಳಿಕ ನಡೆದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು. ಮುಜರಾಯಿ ಇಲಾಖೆ ನಾಡಿನ ಕೋಟ್ಯಂತರ ಶ್ರದ್ಧೆ ಸದಾಚಾರಗಳಿಗೆ ಸಂಬಂಧಿಸಿರುವ ಇಲಾಖೆಯಾಗಿರುವುದರಿಂದ ಶತಶತಮಾನಗಳಿಂದ […]