ಬಸವ ನಾಡಿನಲ್ಲಿ 6 ರಿಂದ 8ನೇ ತರಗತಿ ಶಾಲೆಗಳು ಆರಂಭ- ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ

ವಿಜಯಪುರ: ರಾಜ್ಯಾದ್ಯಂತ ಇಂದಿನಿಂದ 6 ರಿಂದ 8 ನೇ ತರಗತಿ ಶಾಲೆಗಳು ಆರಂಭವಾಗಿದ್ದು, ಗುಮ್ಮಟ ನಗರಿ ವಿಜಯಪುರದಲ್ಲಿಯೂ ತರಗತಿಗಳು ಪ್ರಾರಂಭವಾಗಿವೆ.

ವಿದ್ಯಾರ್ಥಿಗಳು ಕೂಡ ಶಾಲೆಗೆ ಆಗಮಿಸುತ್ತಿದ್ದಾರೆ. ಕೊರೊನಾ ಭೀತಿಯ ಆತಂಕದಲ್ಲಿಯೃ ಮಕ್ಕಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ. ಎಲ್ಲ‌ ಶಾಲೆಗಳಲ್ಲಿ ಮಕ್ಕಳಿಗೆ ಸೈನಿಟೇಶನ್ ಹಾಕುವ ಜೊತೆಗೆ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿ ಪ್ರಾರಂಭ ಮಾಡಲಾಗಿದೆ.

ಒಂದು ಬೇಂಚಿನಲ್ಲಿ ಒಬ್ಬರು ಇಲ್ಲವೇ ಇಬ್ಬರು ವಿದ್ಯಾರ್ಥಿಗಳನ್ನು ಕೂಡಿಸಿ ಪಾಠ ಮಾಡಲಾಗುತ್ತಿದೆ. ಒಂದು ತರಗತಿಯಲ್ಲಿ ಶೇ. 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕವಾಗಿ ಹಾಜರಾತಿಗೆ ಅವಕಾಶ ನೀಡಲಾಗುತ್ತಿದೆ.

ವಿಜಯಪುರ ಜಿಲ್ಲೆಯಲ್ಲಿ 6 ರಿಂದ 8ನೇ ತರಗತಿವರೆಗೆ ಪಾಠ ಮಾಡುವ ಸರಕಾರಿ, ಅನುದಾಇತ, ಅನುದಾನಿತ ಸೇರಿ ಒಟ್ಟು ಒಟ್ಟು 2037 ಶಾಲೆಗಳಿವೆ. ಈ ಶಾಲೆಗಳಲ್ಲಿ ಈ ಬಾರಿ 6, 7 ಮತ್ತು 8ನೇ ತರಗತಿಗಳಿಗೆ 1 ಲಕ್ಷ 49 ಸಾವಿರದ 512 ವಿದ್ಯಾರ್ಥಿಗಳು ಈ ಬಾರಿ ಪ್ರವೇಶ ಪಡೆದಿದ್ದಾರೆ‌.

 

ವಿಜಯಪುರ ನಗರದಲ್ಲಿಯೇ ಅತೀ ಹೆಚ್ಚು ಮಕ್ಕಳು ಓದುತ್ತಿರುವ ರವೀಂದ್ರನಾಥ ಠಾಗೋರ ಶಾಲೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ‌. ವಿದ್ಯಾರ್ಥಿಗಳಿಗೆ ಸೈನಿಟೇಜರ್ ಸೌಲಭ್ಯ ಒದಗಿಸಿ, ಸಾಮಾಜಿಕ ಅಂತರ ಕಾಪಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸರಕಾರದ ಆದೇಶದಂತೆ ಕೊರೊನಾ ಮಾರ್ಗಸೂಚಿ ಪಾಲಿಸುವದಾಗಿ ಶಾಲೆಯ ಚೇರ್ಮನ್ ಶಿವಾಜಿ ಗಾಯಕವಾಡ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌