ಸೆ. 08 ರಂದು ಬುಧವಾರ ಕೋವಿಡ್-19 ಲಸಿಕಾ ಮೇಳ ಆಯೋಜನೆ- ಎಲ್ಲೆಲ್ಲಿ ಗೊತ್ತಾ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸೆ. 8 ರಂದು ಬುಧವಾರ ಕೋವಿಡ್-19 ಲಸಿಕಾ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಪ್ರತಿ ಬುಧವಾರ ಕೋವಿಡ್-19 ಲಸಿಕಾಕರಣದ ಮೇಳ ನಡೆಸಲು ಸರಕಾರ ನಿರ್ದೇಶನ ನೀಡಿದೆ. ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾಕರಣದ ಮೇಳವನ್ನು ನಡೆಸಲಾಗುತ್ತಿದೆ. ಬುಧವಾರ ವಿಜಯಪುರ ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪ ಆರೋಗ್ಯ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು […]

ಗುಮ್ಮಟ ನಗರಿಯ ಸ್ವಚ್ಛತೆಗೆ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದ ಇಟಗಿ ಪೆಟ್ರೋಲ್ ಪಂಪದಿಂದ ಗೋಳಗುಮ್ಮಟ ವರೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2021-22 ನೇ ವರ್ಷದ ನೆಹರು ಯುವ ಕೇಂದ್ರ ಜಿಲ್ಲಾ ಸಲಹಾ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛತಾ ಹಾಗೂ ಕೋವಿಡ್ ನಂತಹ ಜಾಗೃತಿ ಕಾರ್ಯಕ್ರಮಗಳನ್ನು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಬೇಕು ಎಂದು ಸೂಚನೆ ನೀಡಿದರು. ಯುವ ಸಬಲೀಕರಣ, ಕ್ರೀಡಾ ಇಲಾಖೆ […]

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡುವೆ- ಕಲಬುರಗಿಯಲ್ಲಿ ಜೆಡಿಎಸ್ ಜೊತೆಗೂಡಿ ಅಧಿಕಾರ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದು, ನೀಡಿ ಹಣಕಾಸು, ಲೋಕೋಪಯೋಗಿ ಸಚಿವರನ್ನು ಭೇಟಿಯಾಗಲಿರುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಕೇಂದ್ರ ಸಚಿವರಾದ ನಿತಿನ ಗಡ್ಕರಿ ಅವರನ್ನು ಭೇಟಿಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ತಿಳಿಸಿದರು. ವಸತಿ ಹಾಗೂ ನಗರಾಭಿವೃದ್ಧಿ ಸಚಿವರನ್ನೂ ಭೇಟಿಯಾಗುತ್ತೇನೆ. ರಾಜ್ಯದ ನಾನಾ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಹಣಕಾಸು ಸಚಿವರ ಬಳಿ ಕೇಂದ್ರ […]

ಕಂದು ರೋಗ ಲಸಿಕಾ ಕಾರ್ಯಕ್ರಮದಿಂದ ಜಾನುವಾರುಗಳು, ರೈತರಿಗೆ ಹೆಚ್ಚು ಅನುಕೂಲ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಕರುಗಳ ಕಂದು ರೋಗ ಲಸಿಕಾ ಕಾರ್ಯಕ್ರಮ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಇದರಿಂದ ರೈತರಿಗೆ ಅದರಲ್ಲೂ ಬಡ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದರು. ವಿಜಯಪುರ ನಗರದ ಭೂತನಾಳ ಕೆರೆಯ ಹತ್ತಿರದ ಗೋಶಾಲೆಯಲ್ಲಿ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಲಾಗಿದ್ದ ಆಕಳು ಮತ್ತು ಎಮ್ಮೆಗಳ ಹೆಣ್ಣು ಕರುಗಳ ರಾಷ್ಟ್ರೀಯ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಕರುವಿಗೆ ಪೂಜೆ ಸಲ್ಲಿಸಿ, ಲಸಿಕೆ ಹಾಕುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿ ಅವರು […]