ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸೆ. 8 ರಂದು ಬುಧವಾರ ಕೋವಿಡ್-19 ಲಸಿಕಾ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.
ಪ್ರತಿ ಬುಧವಾರ ಕೋವಿಡ್-19 ಲಸಿಕಾಕರಣದ ಮೇಳ ನಡೆಸಲು ಸರಕಾರ ನಿರ್ದೇಶನ ನೀಡಿದೆ. ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾಕರಣದ ಮೇಳವನ್ನು ನಡೆಸಲಾಗುತ್ತಿದೆ. ಬುಧವಾರ ವಿಜಯಪುರ ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪ ಆರೋಗ್ಯ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂಭವನಿಯ ಕೊರೊನಾ 3ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಲಸಿಕಾಕರಣಕ್ಕೆ ಮೊದಲನೇ ಡೋಸ್ ಮತ್ತು ಎರಡನೇ ಡೋಸ್ ಬಾಕಿ ಇರುವ ಅರ್ಹ ಫಲಾನುಭವಿಗಳು ಸಮೀಪದ ಆರೋಗ್ಯ ಕೇಂದ್ರದಲ್ಲಿ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.