ವಿಜಯಪುರ: ವಿಜಯಪುರ ನಗರದ ಇಟಗಿ ಪೆಟ್ರೋಲ್ ಪಂಪದಿಂದ ಗೋಳಗುಮ್ಮಟ ವರೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2021-22 ನೇ ವರ್ಷದ ನೆಹರು ಯುವ ಕೇಂದ್ರ ಜಿಲ್ಲಾ ಸಲಹಾ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛತಾ ಹಾಗೂ ಕೋವಿಡ್ ನಂತಹ ಜಾಗೃತಿ ಕಾರ್ಯಕ್ರಮಗಳನ್ನು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಬೇಕು ಎಂದು ಸೂಚನೆ ನೀಡಿದರು.
ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೇಕ್ಕಳಕಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ ಎಸ್. ಡೊಂಗರೆ, ಬೇಬಿ ದೊಡಮನಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.