ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಸುಧಾರಣೆ ಯೋಜನೆ ವಿಸ್ತರಣೆ ಸೇರಿ ನಾನಾ ಯೋಜನೆಗಳಿಗೆ ಆಗ್ರಹ- ನವದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಸಿಎಂ ಚರ್ಚೆ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದಲ್ಲಿದ್ದು, ಕೇಂದ್ರ ಭೂಸಾರಿಗೆ, ರಾಷ್ಟ್ರೀಯ ಹೆದ್ದಾರಿ ಮತ್ತು ಎಂಎಸ್‌ಎಂಇ ಸಚಿವ ನಿತೀನ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಆಗಬೇಕಿರುವ ಕಾಮಗಾರಿಗಳಿಗೆ ಆದ್ಯತೆ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ನಿತೀನ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿರುವ ಅವರು, ವಿಜಯಪುರ- ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ NH-548B ಸುಧಾರಣೆ ಯೋಜನೆಯನ್ನು ಈಗ 80 ಕಿ. ಮೀ. ಗೆ ಸೀಮಿತಗೊಳಿಸಿ […]

ಗುರುವಾರ ಯಕ್ಕುಂಡಿಯಲ್ಲಿ ಕೆರೆಗೆ ಬಾಗೀನ, ನಾನಾ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ- ಶಾಸಕ ಎಂ. ಬಿ. ಪಾಟೀಲ ಭಾಗಿ

ವಿಜಯಪುರ: ಕೃಷ್ಣಾ ನದಿ ನೀರಿನಿಂದ ಭರ್ತಿಯಾಗಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಕೆರೆಗೆ ಬಾಗೀನ ಅರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದ್ದು, ಶಾಸಕ ಎಂ. ಬಿ. ಪಾಟೀಲ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಬಬಲೇಶ್ವರ ವಿಧಾನ ಸಭೆhu ಕ್ಷೇತ್ರದ ಯಕ್ಕುಂಡಿ ಗ್ರಾಮದ ಕೊಪ್ಪದ ಅವರ ತೋಟದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಚನ್ನಪ್ಪ ಸಿದಗೊಂಡಪ್ಪ ಕೊಪ್ಪದ ಸಹೋದರರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ. ಬೆ 11ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದ ಕೆರೆಯು ಕೃಷ್ಣಾ ನದಿಯಿಂದ […]

ಡೋಣಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ- ಎಲ್ಲಿ ಗೊತ್ತಾ?

ವಿಜಯಪುರ: ತುಂಬಿ ಹರಿಯುತ್ತಿದ್ದ ಡೋಣಿ ನದಿಯನ್ನು ದಾಟಲು ಯತ್ನಿಸಿದ ಬೈಕ್ ಸವಾರನೊಬ್ಬ ಕೊಚ್ಚಿ ಹೋಗುತ್ತಿದ್ದಾಗ, ಆತನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಡಗಿನಾಳ ಡೋಣಿ ಸೇತುವೆ ಬಳಿ ನಡೆದಿದೆ. ಈ ಸೇತೇವೆ ಡೋಣಿ ನಧಿಯ ಕೆಳಮಟ್ಟದಲ್ಲಿದ್ದು ತುಂಬಿ ಹರಿಯುತ್ತಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮೂಕಿಹಾಳ ಗ್ರಾಮದ ಯುವಕ ಇಸ್ಮಾಯಿಲ ಭಾವಿಕಟ್ಟಿ(23) ನೀರಿನ ಆಳವನ್ನು ಗಮನಿಸದೇ ಭಂಡ ಧೈರ್ಯದಿಂದ ಬೈಕಿನಲ್ಲಿ ಸಂಚರಿಸಿದ್ದಾರೆ. ಆಗ ಬೈಕ್ ಸಮೇತವಾಗಿ ನೀರಿನ ರಬಸಕ್ಕೆ […]

ವಿಜಯಪುರದಲ್ಲಿ ಗಣೇಶೋತ್ಸವಕ್ಕೆ ಐದು ದಿನ ಮಾತ್ರ ಅವಕಾಶ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಸರಕಾರದ ಆದೇಶದಂತೆ ವಿಜಯಪುರ ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಸರಳ, ಶಾಂತಿಯುತ ಮತ್ತು ಭಕ್ತಿಪೂರ್ವಕವಾಗಿ ಆಚರಿಸುವ ನಿಟ್ಟಿನಲ್ಲಿ ಗಣೇಶೋತ್ಸವವನ್ನು ಐದು ದಿನಗಳಿಗೆ ಮಾತ್ರ ಸೀಮಿತ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಶಾಂತತೆ ಹಾಗೂ ಕೋವಿಡ್ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ […]

ರೇಲ್ವೆ ಸಚಿವರನ್ನು ಭೇಟಿ ಮಾಡಿದ ಸಿಎಂ- ಕಲಬುರಗಿ ರೇಲ್ವೆ ಡಿವಿಜನ್, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬೇಡಿಕೆ ಈಡೇರಿಸಲು ಮನವಿ

ನವದೆಹಲಿ: ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲಬುರ್ಗಿಯಲ್ಲಿ ರೈಲ್ವೆ ವಲಯ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿಪಿಆರ್ ಮಾಡಲಾಗಿದ್ದರೂ ಅದನ್ನು […]