ಗಣೇಶೋತ್ಸವ ನಿರ್ಬಂಧ ಸಡಿಲಿಕೆ- ಸಿಎಂ ರಿಂದ ದೂರವಾಣಿ ಮೂಲಕ ಮಾಹಿತಿ- ಯತ್ನಾಳ ಪೇಸ್ ಬುಕ್ ಮೂಲಕ ಮಾಹಿತಿ

ವಿಜಯಪುರ: ಗಣೇಶೋತ್ಸವ ಆಚರಣೆಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸರಕಾರ ತಮ್ಮ ಬೇಡಿಕೆಯಂತೆ ಸಡಿಲಗೊಳಿಸಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುದ್ದಾಗಿ ತಮಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ಪೇಸ್ ಬುಕ್ ನಲ್ಲಿ ತಿಳಿಸಿರುವ ಯತ್ನಾಳ, ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರು, ವಿಜಯಪುರ ನಗರ ಶಾಸಕರಾದ ಶ್ರೀ ಬಸನಗೌಡ ಪಾಟೀಲ ಯತ್ನಾಳರವರಿಗೆ ಇಂದು […]

ವಸತಿ ಯೋಜನೆಗಳಡಿ ನಾಲ್ಕು ಲಕ್ಷ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ನಾಯಿ ಸೂಚನೆ

ಬೆಂಗಳೂರು: ನಾನಾ ವಸತಿ ಯೋಜನೆಗಳಡಿ ನಾಲ್ಕು ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಸರಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರಕಾರದಿಂದ ನಾಲ್ಲು ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ […]

ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಎಲ್ಲರಿಗೂ ದಾರಿದೀಪವಾಗಿವೆ- ಎಸ್. ಆರ್. ಪಾಟೀಲ

ವಿಜಯಪುರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುರಾಣ ಮಂಗಲೋತ್ಸವ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಶರಣಸೋಮನಾಳ ಗ್ರಾಮದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಮಾತನಾಡಿದರು ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಎಲ್ಲರಿಗೂ ದಾರಿದೀಪಗಳಾಗಿವೆ. ಎಲ್ಲರೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳು ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಅಂತಾರಾಜ್ಯ ಕಳ್ಳರ ಹೆಡೆಮುರಿ ಕಟ್ಟಿದ ಬಸವ ನಾಡಿನ ಪೊಲೀಸರು

ವಿಜಯಪುರ: ಅವರದೇ ಆದ ಗ್ಯಾಂಗ್ ನ್ನು ಕಟ್ಟಿಕೊಂಡು ರಾಜ್ಯದ ನಾನಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ನಡೆಸಿ ತಲೆ ಮರೆಸಿಕೊಂಡಿದ್ದ ಐನಾತಿ ಕಳ್ಳರ ಗುಂಪೊಂದನ್ನು ಬಸವ ನಾಡಿನ ಪೊಲೀಸುರ ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರದಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಎಚ್. ಡಿ. ಆನಂದ ಕುಮಾರ, ವಿಜಯಪುರ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಮನೆಗಳ ಕಳ್ಳತನ ಪ್ರಕರಣಗಳು ವರದಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಳ್ಳರ ಕಾಟ ತಡೆಯಲು ಅವರ ಹೆಡೆಮುರಿ ಕಟ್ಟಲು ಪ್ರತ್ಯೇಕವಾದ ತಂಡವನ್ನು ರಚಿಸಲಾಗಿತ್ತು. ಈ ತಂಡ ಈಗ […]

ಹೊನಲು ಬೆಳಕಿನಲ್ಲಿ ಬ್ಯಾಟ್ ಬೀಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಲ್ಲಿ ಸೇರಿದ್ದು ಕೆಲವೇ ಕೆಲವು ಜನ. ಪ್ರೇಕ್ಷಕರೂ ಇರಲಿಲ್ಲ. ಹಾಲಿ ಆಟಗಾರರೂ ಬಂದಿರಲಿಲ್ಲ. ಆದರೆ, ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾತ್ರಿ ವೇಳೆ ತೆರಳಿ ಹೊನಲು ಬೆಳಕಿನಲ್ಲಿ ಬ್ಯಾಟ್ ಬೀಸಿಯೇ ಬಿಟ್ಟರು. ಈ ಅಪರೂಪದ ಘಟನೆ ನಡೆದಿದ್ದು ರಾಜದಾನಿ ಬೆಂಗಳೂರಿನ ಕೆ ಎಸ್ ಸಿ ಎ ಚಿನ್ನಸ್ವಾಮಿ‌ ಕ್ರೀಡಾಂಗಣದಲ್ಲಿ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು ಅಳವಡಿಸಲಾಗಿದೆ. ಈ ಫ್ಲಡ್ ಲೈಟಿಂಗ್ ಟವರ್ ಗಳನ್ನು ಮುಖ್ಯಮಂತ್ರಿಗಳು ರಾತ್ರಿ ವೇಳೆ ಲೋಕಾರ್ಪಣೆ ಮಾಡಿದರು. ಬಳಿಕ […]

ಭರ್ತಿಯಾದ ಯಕ್ಕುಂಡಿ ಕೆರೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಕೆರೆ ಸಂಪೂರ್ಣ ಭರ್ತಿಯಾಗಿದ್ದು, ಮಾಜಿ ಸಚಿವ, ಶಾಸಕ ಎಂ. ಬಿ. ಪಾಟೀಲ ಗಂಗಾಪೂಜೆ ಸಲ್ಲಿಸಿ, ಬಾಗೀನ ಅರ್ಪಿಸಿದರು. ಶಾಸಕ ಎಂ. ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಜಾರಿಗೆ ತಂದ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದ ಕೆರೆಗೆ ಕೃಷ್ಣಾ ನದಿಯಿಂದ ಮುಳವಾಡ ಏತ ನೀರಾವರಿ ಯೋಜನೆಯ ಮಲಘಾಣ ಪಶ್ಚಿಮ ಕಾಲುವೆಯಿಂದ ನೀರು ಹರಿಸಲಾಗಿದೆ. ಇದರಿಂದಾಗಿ ಈಗ ಯಕ್ಕುಂಡಿ ಹಾಗೂ ಸುತ್ತಲಿನ ಪ್ರದೇಶ ಹಚ್ಚ-ಹಸಿರಿನಿಂದ ಕಂಗೊಳಿಸುತ್ತಿದೆ. […]