ಬೆಂಗಳೂರು: ನಾನಾ ವಸತಿ ಯೋಜನೆಗಳಡಿ ನಾಲ್ಕು ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸರಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರಕಾರದಿಂದ ನಾಲ್ಲು ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.
ಅದರಂತೆ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ ನಾಲ್ಕು ಲಕ್ಷ ಹೊಸ ಮನೆಗಳಿಗೆ ಎದುರಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.