ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಎಲ್ಲರಿಗೂ ದಾರಿದೀಪವಾಗಿವೆ- ಎಸ್. ಆರ್. ಪಾಟೀಲ

ವಿಜಯಪುರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುರಾಣ ಮಂಗಲೋತ್ಸವ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಶರಣಸೋಮನಾಳ ಗ್ರಾಮದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಮಾತನಾಡಿದರು ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಎಲ್ಲರಿಗೂ ದಾರಿದೀಪಗಳಾಗಿವೆ. ಎಲ್ಲರೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳು ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌