ಕೆರೂರ ಕೆಪಿಟಿಸಿಎಲ್ ನೂತನ ಉಪ ವಿದ್ಯುತ್ ಕೇಂದ್ರ ಕಾಮಗಾರಿಗೆ ಚಾಲನೆ
ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರ ಬಳಿ ಕೆಪಿಟಿಸಿಎಲ್ ನೂತನ 110 ಕೆವಿ ವಿದ್ಯುತ್ ಉಪಕೇಂದ್ರದ ಕಾಮಗಾರಿಗೆ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಮತ್ತು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಭೂಮಿ ಪೂಜೆ ನೆರವೇರಿಸಿದರು. ಜಿಗಜೇವಣಗಿ ಮತ್ತು ಕೆರೂರು ಗ್ರಾಮಗಳ ಜನರ ಬಹುದಿನ ಗಳ ಬೇಡಿಕೆಗೆ ಇದರಿಂದ ಸ್ಪಂದನೆ ಸಿಕ್ಕಂತಾಗಿದೆ. ಈ ಸಂದರ್ಭದಲ್ಲಿ ಜಿಗಜೇವಣಗಿ ಮತ್ತು ಕೆರೂರ ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿ. ಪಂ. ಮಾಜಿ ಸದಸ್ಯರು, ಮುಖಂಡರು ಮತ್ತು ಗ್ರಾಮಸ್ಥರು […]
ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ನೂತನ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು. ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಮುಂಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಆರೋಗ್ಯಕ್ಕೆ ಜೀವನಾಡಿ ಆಂಬ್ಯುಲೆನ್ಸ್. ಆರೋಗ್ಯ ಯಾವಾಗ ಕೆಡುತ್ತದೆ ಎಂದು ತಿಳಿಯುವುದು […]
ಇಂಡಿ ತಾಲೂಕು ಸಮಗ್ರ ನೀರಾವರಿಗೆ ಆಗ್ರಹ- ಹೊರ್ತಿಯಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಇಂಡಿಯಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ 12ನೇ ದಿನಕ್ಕೆ ಕಾಲಿಟ್ಟಿದ್ದು, ಈ ಹೋರಾಟದ ಅಂಗವಾಗಿ ಹೊರ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದಾರೆ. ಹೂರ್ತಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಾಲಯ ಪಕ್ಕದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 52ರಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಕೂಡಲೇ ಸರಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ […]
ಶ್ರೀ ಗಜಾನನ ಉತ್ಸವ ಮಹಾಮಂಡಳದ ಆಶ್ರಯದಲ್ಲಿ ಕೊರೊನಾ ಲಸಿಕೆ ಅಭಿಯಾನ
ವಿಜಯಪುರ: ವಿಜಯಪುರ ನಗರ ಛತ್ರಪತಿ ಶಿವಾಜಿ ಸರ್ಕಲ್ ನಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಜಾನನ ಉತ್ಸವ ಮಹಾಮಂಡಳದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯಿತು. ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿರುವ ರಾಜ್ಯ ಸರಕಾರ ಸಾರ್ವಜನಿಕ ಗಣೇಶ ಉತ್ಸವ ಸ್ಥಳಗಳಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನೂ ನಡೆಸುವಂತೆ ಸೂಚನೆ ನೀಡಿದೆ. ಅದರಂತೆ ವಿಜಯಪುರದ ಶ್ರೀ ಗಜಾನನ ಉತ್ಸವ ಮಹಾಮಂಡಳದ ಸ್ಥಳದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿ ಆಗಮಿಸಿ ಕೊರೊನಾ ಲಸಿಕೆ ಅಭಿಯಾನ ಕೈಗೊಂಡರು. ಈ ಸಂದರ್ಭದಲ್ಲಿ 60 ಜನರಿಗೆ […]
ನೂತನ 120 ಆರೋಗ್ಯ ಕವಚ ಆ್ಯಂಬುಲನ್ಸ್ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 129 ನೂತನ 108 ಆರೋಗ್ಯ ಕವಚ ಆ್ಯಂಬುಲನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ಹೊಸದಾಗಿ 120 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ, ಸಾರಿಗೆ ಸಚಿವ ಬಿ. ಶ್ರೀರಾಮುಲು, ಸಹಕಾರ ಸಚಿವ ಎಸ್. ಟಿ. ಸೋಮಶೇಖರ, ತೋಟಗಾರಿಕೆ ಸಚಿವ ಮುನಿರತ್ನ […]