ಗುಜರಾತಿಗೆ ತೆರಳಿ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ

ಗಾಂಧಿನಗರ(ಗುಜರಾತ): ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ ಅವರಿಗೆ‌ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ.

ಗಾಂಧಿನಗರದ ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು.

 

ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ತೆರಳಿದ್ದ ಸಚಿವರಾದ ಆರ್. ಅಶೋಕ, ಮುರುಗೇಶ ನಿರಾಣಿ, ಡಾ. ಕೆ. ಸುಧಾಕರ ಅವರೂ ಕೂಡ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ ಅವರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೇಂದ್ರ ಗೃಹ ಅಚಿವ ಅಮಿತ್ ಷಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ ಅವರನ್ನು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದರು.

Leave a Reply

ಹೊಸ ಪೋಸ್ಟ್‌