ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಧನ ಹೆಚ್ಚಳಕ್ಕೆ ಪರಿಶೀಲನೆ-ಎಂ ಎಲ್ ಸಿ ಸುನೀಲಗೌಡ ಪಾಟೀಲ ಪ್ರಶ್ನೆಗೆ ಸಚಿವ ಕೋಟ ಹೇಳಿಕೆ
ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಸಧ್ಯಕ್ಕೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸುವ ಕುರಿತು ಸರಕಾರ ಪರಿಶೀಲಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಪರವಾಗಿ ಸಮಾಜ ಕಲ್ಯಾಣ ಸಚಿವ ಮತ್ತು ವಿಧಾನ ಪರಿಷತ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಕುರಿತ ವಿಜಯಪುರ- ಬಾಗಲಕೋಟೆ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಸದನದಲ್ಲಿ ಪ್ರಸ್ತಾಪಿಸಿದರು. ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು […]
ಎನ್ ಇ ಪಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಎನ್ ಇ ಪಿ(ನ್ಯೂ ಎಜುಕೇಶನ್ ಪಾಲಿಸಿ) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಆಯೋಜಿಸಿದ್ದ ಭಾರತದ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ 161 ನೇ ಜಯಂತಿ ಅಂಗವಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. […]
ಸೆ. 17ರಂದು ವಿಜಯಪುರ ಜಿಲ್ಲೆಯಲ್ಲಿ ಒಂದು ಲಕ್ಷ ಲಸಿಕೆ ಹಾಕಲು ಅಭಿಯಾನ- ಯೋಜನೆ ಕುರಿತು ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸೆ. 17ರಂದು ಒಂದು ಲಕ್ಷ ಜನರಿಗೆ ಲಸಿಕೆ ಹಾಕುವ ಅಭಿಯಾನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಾಳಿಕೋಟೆ, ಬಸವನ ಬಾಗೇವಾಡಿ, ದೇವರ ಹಿಪ್ಪರಗಿ ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಸೆ. 17 ರಂದು ಆಯೋಜಿಸಲಾಗಿರುವ ಒಂದು ಲಕ್ಷ ಉಚಿತ ಲಸಿಕೆ ಹಾಕುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು. ಈ ಉಚಿತ ಲಸಿಕಾಕರಣ ಮೇಳದಲ್ಲಿ ಹೆಚ್ಚಿನ […]
ಸರ್ ಎಂ ವಿಶ್ವೇಶ್ವರಯ್ಯ ನಾಡು ಕಟ್ಟುವ ಶ್ರಮಿಕ ವರ್ಗದವರ ಪ್ರತಿನಿಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ದೇಶದ ಆರ್ಥಿಕತೆಯನ್ನು ಬಲಪಡಿಸುವ ರೈತರು, ಶ್ರಮಿಕ ವರ್ಗದವರೇ ನಿಜವಾಗಿ ನಾಡು ಕಟ್ಟುವವರು. ಈ ವರ್ಗದವರನ್ನು ಸರ್. ಎಂ. ವಿಶ್ವೇಶ್ವರಯ್ಯ ಪ್ರತಿನಿಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಎಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಕೆ. ಆರ್. ವೃತ್ತದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದ ಅವರು ಬಿಬಿಎಂಪಿ ವತಿಯಿಂದ ನಿರ್ಮಿಸಿರುವ 160 ಅಡಿ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪಿರಮಿಡ್ ನ ಅತ್ಯಂತ ಕೆಳಸ್ತರದಲ್ಲಿ ದುಡಿಯುವ ವರ್ಗದವರು ನಮ್ಮ […]
ಬಸವ ಜನ್ಮಸ್ಥಳದಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
ವಿಜಯಪುರ: ಪಂಚಮಸಾಲಿ ಸಮಾಜವನ್ನು 2A ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಅಖಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭೆ ರಾಷ್ಟ್ರೀಯ ಯುವ ಘಟಕದ ವತಿಯಿಂದ ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಸವೇಶ್ವರ ಚೌಕಿನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪಟ್ಟಣದ ಮಿನಿ ವಿಧಾನಸೌಧದ ವರೆಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಅ. 1 ರೊಳಗೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು […]
ಎಂಜಿನಿಯರ್ಸ್ ದಿನಾಚರಣೆ- ವಿಶ್ವೇಶ್ವರಯ್ಯ ಪ್ರತಿಮೆಗೆ ಸಿಎಂ ನಮನ ಸಲ್ಲಿಕೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂಜಿನಿಯರ್ಸ್ ದಿನಾಚರಣೆ ಅಂಗವಾಗಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬೆಂಗಳೂರಿನಲ್ಲಿ ನಡೆಷ ಕಾರ್ಯಕ್ರಮದಲ್ಲಿ ಸಿಎಂ ಚಂದನ್ ಎಂಬ ಐಟಿಐ ಪದವಿಧರನಿಂದಲೂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಸಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ಅವರ 161 ಜಯಂತಿ ಉತ್ಸವದ ಅಂಗವಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು.