ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸೆ. 17ರಂದು ಒಂದು ಲಕ್ಷ ಜನರಿಗೆ ಲಸಿಕೆ ಹಾಕುವ ಅಭಿಯಾನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಾಳಿಕೋಟೆ, ಬಸವನ ಬಾಗೇವಾಡಿ, ದೇವರ ಹಿಪ್ಪರಗಿ ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಸೆ. 17 ರಂದು ಆಯೋಜಿಸಲಾಗಿರುವ ಒಂದು ಲಕ್ಷ ಉಚಿತ ಲಸಿಕೆ ಹಾಕುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು.
ಈ ಉಚಿತ ಲಸಿಕಾಕರಣ ಮೇಳದಲ್ಲಿ ಹೆಚ್ಚಿನ ಸಂಖ್ಯೆಯ ಅರ್ಹ ಫಲಾನುಭವಿಗಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ಆಯಾ ತಾಲೂಕುಗಳ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.