ಪ್ರಧಾನಿಯವರಿಂದ ಸರ್ವವ್ಯಾಪಿ. ಸರ್ವಸ್ಪರ್ಶಿ ಆಡಳಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘನೆ

ದಾವಣಗೆರೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಕ್ಷರಶಃ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುವ ಮೂಲಕ ದೇಶವನನ್ನು ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ದೇಶಕ್ಕಾಗಿ ತ್ಯಾಗ ಮಾಡಬೇಕೆಂನ್ನುವ ಮನೋಭಾವ ಸಂಪೂರ್ಣವಾಗಿ ಮರೆತು ಹೋಗಿರುವ ಸಂದರ್ಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ನಮ್ಮ ನಾಯಕರಾದ ಬಿ. ಎಸ್. ಯಡಿಯೂರಪ್ಪ […]

ನಿಯಂತ್ರಣ ತಪ್ಪಿ ಹಳ್ಳದ ಪಕ್ಕದ ಕಂಬಕ್ಕೆ ಢಿಕ್ಕಿ ಹೊಡೆದ ಬಸ್- ಪ್ರಯಾಣಿಕರು ಅಪಾಯದಿಂದ ಪಾರು

ವಿಜಯಪುರ: ರಾಜ್ಯ ಸಾರಿಗೆ ಬಸ್ಸೋಂದು ಹಳ್ಳದ ಮೇಲೆ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳದ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ತೀರದ ಉಮರಾಣಿ ಬಳಿ ನಡೆದಿದೆ. ಇಂಡಿಯಿಂದ ಉಮರಾಣಿ ಕಡೆಗೆ ಹೊರಟಿದ್ದ ಬಸ್ಸು ಕಲ್ಲಮಡ ಹಳ್ಳದ ಮೇಲೆ ಸಂಚರಿಸುವಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸುಮಾರು 15 ಜನ ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಆದರೆ, ಅದೃಷ್ಠವಶಾತ ಬಸ್ಸು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಿಂತಿದ್ದರಿಂದ […]

ಸೆ. 21ರಂದು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜಿಲ್ಲಾ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ- ಶಂಕರಗೌಡ ಬಿರಾದಾರ

ವಿಜಯಪುರ: ಸೆ. 21ರಂದು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ವಿಜಯಪುರ ಜಿಲ್ಲೆಯ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಎಸ್. ಬಿರಾದಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾರಂಭದಲ್ಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ, ಪಾದಯಾತ್ರೆ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ, ಕಾರ್ಯಾಧ್ಯಕ್ಷ ಎಚ್. ಎಸ್. […]

ಬಸವ ನಾಡಿನಲ್ಲಿ ಸುಸೂತ್ರವಾಗಿ ನಡೆದ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಿ ದ್ವಿತೀಯ ದರ್ಜೆ ಸಹಾಯಕರ ನಾನಾ ಹುದ್ದೆಗಳಿಗಾಗಿ ನಡೆದ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ವಿಜಯಪುರ ಜಿಲ್ಲಾದ್ಯಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಟ್ಟು 59 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಪರೀಕ್ಷೆಗಾಗಿ 21388 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, 14484 ಅಭ್ಯರ್ಥಿಗಳು ಹಾಜರಾಗಿದ್ದು, 6904 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಡಳಿತ ಮಾಹಿತಿ ನೀಡಿದೆ. ಈ ಮಧ್ಯೆ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ನಾನಾ ಪರೀಕ್ಷೆ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅಧಿವೇಶನದ ಬಳಿಕ ರಾಜ್ಯ ಪ್ರವಾಸ- ಆಡಳಿತಕ್ಕೆ ಚುರುಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ವಿಧಾನ ಡಲ ಅಧಿವೇಶನದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ‌ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಹಲವಾರು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದಿವೆ ಎಂದು ತಿಳಿಸಿದ ಅವರು, ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಹೊಸ ಜಾತಿಗಳನ್ನು ಸೇರ್ಪಡೆ ಮಾಡುವ ಅಧಿಕಾರವನ್ನು ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ […]

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆಗೆ ಶಿಲ್ಯಾನ್ಯಾಸ ನೆರವೇರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಪಿ ಎಲ್ ಐ ಯೋಜನೆಯಡಿ ಕೇಂದ್ರ ಸರಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕರ್ಸಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ […]