ದಾವಣಗೆರೆ: ವಿಧಾನ ಡಲ ಅಧಿವೇಶನದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಹಲವಾರು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದಿವೆ ಎಂದು ತಿಳಿಸಿದ ಅವರು, ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಹೊಸ ಜಾತಿಗಳನ್ನು ಸೇರ್ಪಡೆ ಮಾಡುವ ಅಧಿಕಾರವನ್ನು ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ನೀಡಿರುವುದನ್ನು ಕಾರ್ಯಕಾರಣಿ ಸಭೆ ಸ್ವಾಗತಿಸಿತು.
ದಾವಣಗೆರೆಯ ರಾಜ್ಯ ಕಾರ್ಯಕಾರಣಿ ಸಭೆ ಯಶಸ್ವಿಯಾಗಲು ಕಾರಣೀಭೂತರಾದ ದಾವಣಗೆರೆ ಸಂಸದ ಜಿ. ಎಂ. ಸಿದ್ದೇಶ್ವರ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಿಎಂ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.