ವಿಜಯಪುರ: ರಾಜ್ಯ ಸಾರಿಗೆ ಬಸ್ಸೋಂದು ಹಳ್ಳದ ಮೇಲೆ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳದ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ತೀರದ ಉಮರಾಣಿ ಬಳಿ ನಡೆದಿದೆ.
ಇಂಡಿಯಿಂದ ಉಮರಾಣಿ ಕಡೆಗೆ ಹೊರಟಿದ್ದ ಬಸ್ಸು ಕಲ್ಲಮಡ ಹಳ್ಳದ ಮೇಲೆ ಸಂಚರಿಸುವಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸುಮಾರು 15 ಜನ ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ.
ಆದರೆ, ಅದೃಷ್ಠವಶಾತ ಬಸ್ಸು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಿಂತಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.