ಸೆ. 21ರಂದು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜಿಲ್ಲಾ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ- ಶಂಕರಗೌಡ ಬಿರಾದಾರ

ವಿಜಯಪುರ: ಸೆ. 21ರಂದು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ವಿಜಯಪುರ ಜಿಲ್ಲೆಯ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಎಸ್. ಬಿರಾದಾರ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾರಂಭದಲ್ಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ, ಪಾದಯಾತ್ರೆ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ, ಕಾರ್ಯಾಧ್ಯಕ್ಷ ಎಚ್. ಎಸ್. ಶಿವಶಂಕರ, ಪಂಚ ಸೇನೆ ರಾಜ್ಯಾಧ್ಯಕ್ಷ ಡಾ. ಬಸನಗೌಡ ಪಾಟೀಲ(ನಾಗರಾಳ ಹುಲಿ) ಸೇರಿದಂತೆ ಅನೇಕ ಮುಖಂಡರು ಪಾಲ್ಗೋಳ್ಳಲಿದ್ದಾರೆ ಎಂದು ತಿಳಿಸಿದರು.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಮಲೆ ಮಾದೇಶ್ವರ ಬೆಟ್ಟದಿಂದ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ರಾಜ್ಯ ಅಭಿಯಾನವನ್ನು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಅವರ ಸಾರಥ್ಯದಲ್ಲಿ ನಡೆಯುತ್ತಿದೆ. ಕೂಡಲಸಂಗಮ ದಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆಯನ್ನು ಮಾಡಿ ಬೆಂಗಳೂರು ಮಹಾನಗರದಲ್ಲಿ ಸುಮಾರು ಹತ್ತು ಲಕ್ಷ ಜನರನ್ನು ಸೇರಿಸಿ ದೊಡ್ಡ ಕಾರ್ಯಕ್ರಮವನ್ನು ಯೋಜಿಸಿ ಬೆಂಗಳೂರಿನಲ್ಲಿ 23 ದಿನಗಳ ಕಾಲ ಹೋರಾಟ ಮಾಡಲಾಗಿತ್ತು. ಇಂದು ವಿಧಾನ ಮಂಡಲದಲ ಅಧಿವೇಶನದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿದರು. ಅಂದಿನ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಆರು ತಿಂಗಳ ಸಮಯಾವಕಾಶ ತೆಗೆದುಕೊಂಡಿದ್ದರು. ಆ ಸಮಯ ಸೆ. 15ಕ್ಕೆ ಮುಕ್ತಾಯವಾಗಿದೆ ಎಂದು ತಿಳಿಸಿದರು

ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸರಕಾರವನ್ನು ಈ ಕುರಿತು ನೆನಪಿಸುವ ಸಂಕಲ್ಪದೊಂದಿಗೆ ರಾಜ್ಯಾದ್ಯಂತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ರಾಜ್ಯ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ವಿಜಯಪುರ ಜಿಲ್ಲಾ ಕಾರ್ಯಕ್ರಮ ಸೆ. 21 ರಂದು ಸಿಂದಗಿಯಲ್ಲಿ ಆಯೋಜಿಸಲಾಗಿದೆ ಎಂದು ಶಂಕರಗೌಡ ಬಿರಾದಾರ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ನಾನಾ ಘಟಕಗಳ ಪದಾಧಿಕಾರಿಗಳು, ಸಮಾಜದ ಹಾಲಿ ಮತ್ತು ಮಾಜಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಿರಿಯರು ಪಾಲ್ಗೋಳ್ಳಲಿದ್ದಾರೆ ಎಂದು ತಿಳಿಸಿದರು

ಈ ಸುದ್ದಿಗೋಷ್ಠಿಯಲ್ಲಿ ವಿಜಯಪುರ ನಗರ ಘಟಕದ ಅಧ್ಯಕ್ಷ ಶ್ರೀಶೈಲ ಬುಕ್ಕಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗನಗೌಡ ಸೋಲಾಪುರ, ಬಸವನ ಬಾಗೇವಾಡಿ ತಾಲೂಕು ಯುವ ಘಟಕದ ಅಧ್ಯಕ್ಷ ಸಂಜುಗೌಡ ಬಿರಾದಾರ, ಪಂಚ ಸೇನೆ ಮುಖಂಡರಾದ ಸುನೀಲಗೌಡ ಚಿಕ್ಕೋಂಡ, ಸಂತೋಷ ಬಿರಾದಾರ, ಸಿದ್ದು ಹಳ್ಳೂರ, ದಾನೇಶ ಅವಟಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌