ಬಸವ ನಾಡಿನಲ್ಲಿ ಸುಸೂತ್ರವಾಗಿ ನಡೆದ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಿ ದ್ವಿತೀಯ ದರ್ಜೆ ಸಹಾಯಕರ ನಾನಾ ಹುದ್ದೆಗಳಿಗಾಗಿ ನಡೆದ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ವಿಜಯಪುರ ಜಿಲ್ಲಾದ್ಯಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಟ್ಟು 59 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಪರೀಕ್ಷೆಗಾಗಿ 21388 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, 14484 ಅಭ್ಯರ್ಥಿಗಳು ಹಾಜರಾಗಿದ್ದು, 6904 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಈ ಮಧ್ಯೆ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ನಾನಾ ಪರೀಕ್ಷೆ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

ಹೊಸ ಪೋಸ್ಟ್‌