ಬೆಂಗಳೂರು: ಮೊಹಮ್ಮದ್ ಮೀರಾನ್ ಸಾಹೇಬ್ ಗಲ್ಫ್ ರಾಷ್ಟ್ರಗಳಲ್ಲಿ ಕನ್ನಡ ಉಳಿಸಿ ಬೆಳೆಸುವ ಮೂಲಕ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ 2020ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಆದರೆ, ಪ್ರಧಾನ ಮಾಡಲು ಸಾಧ್ಯವಾಗಿರಲಿಲ್ಲ.
ಬೆಂಗಳೂರಿಗೆ ಆಗಮಿಸಿದ ಮೊಹಮ್ಮದ್ ಮೀರಾನ್ ಸಾಹೇಬ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಬಿಜೆಪಿ ಸಂಸದ ಬಿ. ವೈ. ರಾಘವೇಂದ್ರ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.