ವಿಜಯಪುರ ನಗರದಲ್ಲಿ ಶೀಘ್ರದಲ್ಲಿ ಈಜುಕೋಳ ಪ್ರಾರಂಭ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದಲ್ಲಿ ಈಜುಕೊಳವನ್ನು ಪ್ರಾರಂಭಿಸಿ ಸಾರ್ವಜನಿಕರಿಗೆ ಮತ್ತು ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಿ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್, ಈಜುಕೊಳ, ವಾಕಿಂಗ್ ಟ್ರ್ಯಾಕ್, ಹೊರಾಂಗಣ ಜಿಮ್ ಅಳವಡಿಕೆ, ಒಳಾಂಗಣ ಕ್ರೀಡಾಂಗಣ ನಿರ್ಮಾಣದ ಹಾಗೂ ಸೈಕ್ಲಿಂಗ್ ವೆಲೊಡ್ರೋಮ್ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಕನಕದಾಸ ಬಡಾವಣೆಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಒಳಾಂಗಣ ಈಜುಕೊಳವು ಪೂರ್ಣಗೊಂಡಿದೆ. ಅವಶ್ಯವಿರುವ […]

ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರಿ ಸಾಗರದ ಎತ್ತರ ಹೆಚ್ಚಳಕ್ಕೆ ಕ್ರಮ- ನೀರಾವರಿ ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದ ಎತ್ತರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಧಾನ ಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ ಅಂತಿಮ ಐತೀರ್ಪು ಗೆಜೆಟ್ ಅಧಿಸೂಚನೆ ಪ್ರಕಟಣೆಯಾದ ನಂತರ ಯೋಜನೆಯ ವಿವರವಾದ ಯೋಜನಾ ವರದಿಗೆ ಸಕ್ಷಮ ಪ್ರಾಧಿಕಾರಗಳ ತಿರುವಳಿಯೊಂದಿಗೆ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 519.60 ಮೀ. ದಿಂದ 524.256 ಮೀ. ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿ […]

ಸಿಎಂ ಭೇಟಿಯಾದ ಮಾಜಿ ಸಚಿವ ಎಂ. ಬಿ. ಪಾಟೀಲ ನೇತೃತ್ವದ ಕೃಷ್ಣಾ ತೀರದ ರೈತರ ನಿಯೋಗ- ಯಾಕೆ ಗೊತ್ತಾ?

ಬೆಂಗಳೂರು: ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗಲಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಆಗ್ರಹಿಸಿ ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ತಮ್ಮನ್ನು ಭೇಟಿ ಮಾಡಿದ ರೈತರ ನಿಯೋಗದ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದಸುದರು. ಸಿಎಂ ಭೇಟಿ ಬಳಿಕ ಮಾತನಾಡಿದ ರಾಜ್ಯ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷ ರಾಜೇಂದ್ರ ದೇಸಾಯಿ, […]