ಮುಂದಿನ ಐದು 5 ವರ್ಷಗಳಲ್ಲಿ ಮಲೈ ಮಹದೇಶ್ವರ ಪ್ರಮುಖ ಯಾತ್ರಾ ಸ್ಥಳವಾಗಲಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಪ್ರಮುಖ ಯಾತ್ರಾ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದೆ. ಮೈಸೂರಿನಿಂದ ಬೆಂಗಳೂರಿನವರೆಗೆ ಪ್ರತಿಯೊಬ್ಬರೂ ನಡೆದುಕೊಳ್ಳುವ ಧಾರ್ಮಿಕ ಕ್ಷೇತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಚಿಂತನೆ ನಡೆದು ವೇಗವನ್ನೂ ಪಡೆದುಕೊಂಡಿದೆ. ಇದಕ್ಕೆ […]
ಸೆ. 23 ಗುರುವಾರದಿಂದ ಮೂರು ದಿನ ವಿಜಯಪುರದಲ್ಲಿ ಪವಿತ್ರ ವಸ್ತ್ರ ಪ್ರದರ್ಶನ ಮತ್ತು ಮಾರಾಟ ಅಭಿಯಾನ
ವಿಜಯಪುರ: ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಕಾಲೇಜು ಹಾಗೂ ಚರಕದೇಶಿ ಗ್ರಾಮ ಸೇವಾ ಸಂಘ ಸಾಗರ ಇವರ ಸಹಯೋಗದಲ್ಲಿ ಸೆ. 23 ರಿಂದ ಮೂರು ದಿನಗಳ ಕಾಲ ಪವಿತ್ರ ವಸ್ತ್ರ ಪ್ರದರ್ಶನ ಮತ್ತು ಮಾರಾಟ ಅಭಿಯಾನ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಭಾರತಿ ಖಾಸನೀಸ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಸೆ. 23 ರಂದು ಗುರುವಾರ ಬೆ. 9.30ಕ್ಕೆ ಎಸ್. ಎಸ್. ಪದವಿ […]
ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಿ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ
ವಿಜಯಪುರ: ಲಸಿಕೆ ನೀಡುವ ಕೇಂದ್ರಗಳಲ್ಲಿ ಸಿಬ್ಬಂದಿಯ ಕೊರತೆಯಾಗದಂತೆ ಮತ್ತು ಲಸಿಕಾಕರಣದಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಪ್ರತಿ ಬುಧವಾರ ಲಸಿಕಾ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿಗಳು ಶಾಂತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಆರು ಕೇಂದ್ರಗಳಲ್ಲಿ ಲಸಿಕೆ ನೀಡುತ್ತಿದ್ದು, ನಾನಾ ಕೇಂದ್ರಗಳಲ್ಲಿ ಲಸಿಕಾಕರಣ ಸರಿಯಾದ ಸಮಯದಲ್ಲಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಳ್ಳುವಂತೆ ಹಾಗೂ ಪ್ರತಿ […]
ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಯ 2ನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ 3ನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್ ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ […]