ವಿಜಯಪುರ: ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಕಾಲೇಜು ಹಾಗೂ ಚರಕದೇಶಿ ಗ್ರಾಮ ಸೇವಾ ಸಂಘ ಸಾಗರ ಇವರ ಸಹಯೋಗದಲ್ಲಿ ಸೆ. 23 ರಿಂದ ಮೂರು ದಿನಗಳ ಕಾಲ ಪವಿತ್ರ ವಸ್ತ್ರ ಪ್ರದರ್ಶನ ಮತ್ತು ಮಾರಾಟ ಅಭಿಯಾನ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಭಾರತಿ ಖಾಸನೀಸ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಸೆ. 23 ರಂದು ಗುರುವಾರ ಬೆ. 9.30ಕ್ಕೆ ಎಸ್. ಎಸ್. ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕವಿ, ಕಾವ್ಯ ಮತ್ತು ಚರಕ ಸಂಸ್ಥೆ ಸಂಸ್ಥಾಪಕ ಪ್ರಸನ್ನ, ಬೆಂಗಳೂರು ರಾಷ್ಟ್ರೀಯ ಕೈಮಗ್ಗ ಸಂಸ್ಥೆ ಅಧ್ಯಕ್ಷ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ ಮುಖ್ಯ ಅತಿಥಿಗಳಾಗಿ ಪಾಲ್ಗೋಳ್ಳಲಿದ್ದಾರೆ. ಆಶಾ ಎಂ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಉಪಪ್ರಾಚಾರ್ಯ ಡಾ. ಗೀತಾಂಜಲಿ ಪಾಟೀಲ, ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಯ ಬಂದನಾ ಬ್ಯಾನರ್ಜಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.