ವಿಜಯಪುರ: ಲಸಿಕೆ ನೀಡುವ ಕೇಂದ್ರಗಳಲ್ಲಿ ಸಿಬ್ಬಂದಿಯ ಕೊರತೆಯಾಗದಂತೆ ಮತ್ತು ಲಸಿಕಾಕರಣದಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಪ್ರತಿ ಬುಧವಾರ ಲಸಿಕಾ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿಗಳು ಶಾಂತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯಪುರ ನಗರದ ಆರು ಕೇಂದ್ರಗಳಲ್ಲಿ ಲಸಿಕೆ ನೀಡುತ್ತಿದ್ದು, ನಾನಾ ಕೇಂದ್ರಗಳಲ್ಲಿ ಲಸಿಕಾಕರಣ ಸರಿಯಾದ ಸಮಯದಲ್ಲಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಳ್ಳುವಂತೆ ಹಾಗೂ ಪ್ರತಿ ಮನೆ ಮನೆಗೂ ತೆರಳಿ ಜನರಿಗೆ ಲಸಿಕೆ ಹಾಕಿಸಿ ಕೊಳ್ಳುವಂತೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಾ. ಮಹೇಶ ನಾಗರಬೆಟ್ಟ, ಡಾ, ಕವಿತಾ ದೊಡ್ಡಮನಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.