ಬಸವ ನಾಡಿನಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ- ಕಳೆದ 24 ಗಂಟೆಗಳಲ್ಲಿ ಚಡಚಣದಲ್ಲಿ 35.20 ಮಿ. ಮೀ. ಮಳೆ- ಉಳಿದೆಡೆ ಸುರಿದ ಮಳೆ ಎಷ್ಟು ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಇನ್ನೆರಡು ದಿನ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 24 ಮತ್ತು 25ರ ವರೆಗೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಸಾಧ್ಯತೆ ಶೇ. 50 ರಿಂದ 75 ರಷ್ಟಿದೆ. ಸೆ. 27ರ ವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ ವಿಜಯಪುರ ಜಿಲ್ಲೆಯ ಅಲ್ಲಲ್ಲಿ […]

ಕೈಮಗ್ಗವನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕಿದೆ- ಆಶಾ ಎಂ. ಪಾಟೀಲ

ವಿಜಯಪುರ: ನಾವೆಲ್ಲರೂ ಕೈಮಗ್ಗವನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಗ್ರಾಮ ಸೇವಾ ಸಂಘ ಹೆಗ್ಗೋಡು ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪವಿತ್ರ ವಸ್ತ್ರ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನಮಗ್ಯಾರಿಗೂ ಕೈಮಗ್ಗಗಳ ಬಗ್ಗೆ ಅರಿವು ಇಲ್ಲ. ನಮ್ಮ ಹಿರಿಯರು ನಮಗೆ ಇದರ ಬಗ್ಗೆ ಹೇಳಿಕೊಟ್ಟಿಲ್ಲ. ಕೇವಲ ರಾಜಕಾರಣಿಗಳು ಮಾತ್ರ ಈ […]

ಗುಡಿ ಕೈಗಾರಿಕೆಗಳಿಗೆ, ದುಡಿಯುವ ಕೈಗಳಿಗೆ ಕೆಲಸ ಸಿಕ್ಕರೆ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ನೀಡದಂತಾಗುತ್ತದೆ- ಚರಕ ಸಂಸ್ಥೆಯ ಮುಖ್ಯಸ್ಥ ಪ್ರಸನ್ನ

ವಿಜಯಪುರ: ಗುಡಿ ಕೈಗಾರಿಕೆಗಳಿಗೆ, ದುಡಿಯುವ ಕೈಗಳಿಗೆ ಕೆಲಸ ಸಿಕ್ಕರೆ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಕೊಟ್ಟಂತಾಗುತ್ತದೆ. ವಿಜಯಪುರ ಜಿಲ್ಲೆ ನಿಜವಾಗಿ ಕೈ ಉತ್ಪಾದಕ ಜಿಲ್ಲೆ. ಇಲ್ಲಿಯಷ್ಟು ಕೈಮಗ್ಗಗಳು ಕರ್ನಾಟಕದ ಯಾವುದೇ ಭಾಗದಲ್ಲಿ ಇಲ್ಲ. ಇದನ್ನು ನಾವು ಉಳಿಸಿಕೊಂಡು ಹೋಗಬೇಕಾಗಿದೆ ಎಂದು ಚರಕ ಸಂಸ್ಥೆಯ ಮುಖ್ಯಸ್ಥ, ಹಿರಿಯ ಚಿಂತಕ ಪ್ರಸನ್ನ ಹೇಳಿದರು. ವಿಜಯಪುರ ನಗರದಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಗ್ರಾಮ ಸೇವಾ ಸಂಘ ಹೆಗ್ಗೋಡು ಸಹಯೋಗದಲ್ಲಿ ಆಯೋಜಿಸಿದ್ದ […]

ಜಿಲ್ಲಾ ಕ್ರೀಡಾಂಗಣದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಹೊಸ ಕಾಮಗಾರಿ ಹಾಗೂ ಹಳೆಯ ದುರಸ್ತಿ ಕಾಮಗಾರಿಗಳನ್ನು ಆದ್ಯತೆಗೆ ಅನುಗುಣವಾಗಿ ಮತ್ತು ಅನುದಾನ ಲಭ್ಯತೆಯನ್ನು ಪರಿಗಣಿಸಿ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು 400 ಮೀಟರ್ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ, ಸಂಪ್ ಟ್ಯಾಂಕ್, ಡ್ರೈನೇಜ್ ಕನೆಕ್ಷನ್, ವಾಲಿಬಾಲ್ ಸಿಂಥೆಟಿಕ್ ಮೈದಾನ, ಒಳಾಂಗಣ ಕ್ರೀಡಾಂಗಣ, ಕೃಷ್ಣ ಭಾಗ್ಯ ಜಲ ನಿಗಮದಿಂದ […]

ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಭೇಟಿ ಮಾಡಿದ ಮಾಜಿ ಸಚಿವ ಎಂ. ಬಿ. ಪಾಟೀಲ ನೇತೃತ್ವದ ರೈತರ ನಿಯೋಗ

ಬೆಂಗಳೂರು: ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಎಲ್ಲಾ ರೈತರ ಜಮೀನುಗಳಿಗೆ ಏಕರೂಪ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬಬಲೇಶ್ವರ ತಾಲೂಕಿನ ರೈತರ ನಿಯೋಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮನವಿ ಸಲ್ಲಿಸಿತು. ಈ ಹಿಂದೆ ತಾವು ಮುಖ್ಯ ಮಂತ್ರಿಯಾಗಿದ್ದಾಗ ಹಾಗೂ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ನಮ್ಮ ಬೇಡಿಕೆಯನ್ನು ಒಪ್ಪಿ, ಶಿಫಾರಸ್ಸು ಮಾಡಿದ್ದೀರಿ. ಆದರೆ ನಂತರ ಅದು ಕಾರ್ಯಗತಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕರಾದ ತಾವು ಸದನದಲ್ಲಿ ಈ ವಿಷಯವನ್ನು ಚರ್ಚಿಸಿ, ಏಕರೂಪ ಬೆಲೆ ನಿಗದಿ […]

ಬಸವ ನಾಡಿನ ಕ್ರಿಕೆಟ್ ಆಟಗಾರ್ತಿಯ ಸಾಧನೆಗೆ ಆಧುನಿಕ ಭಗೀರಥನ ಶುಭ ಹಾರೈಕೆ- ಬಿ ಎಲ್ ಡಿ ಇ ಸಂಸ್ಥೆಯಿಂದ ಸಕಲ ನೆರವಿನ ಭರವಸೆ

ವಿಜಯಪುರ: ರಾಜಸ್ಥಾನದಲ್ಲಿ ಸೆ. 28 ರಿಂದ ಅ. 4ರ ವರೆಗೆ 19 ವರ್ಷದೊಳಗಿನ ಮಹಿಳೆಯರ ಕ್ರಿಕೆಟ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿರುವ ಅನ್ನಪೂರ್ಣ ಜಿ. ಭೋಸಲೆ ಅವರ ಸಾಧನೆಗೆ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುನಲ್ಲಿ ವಾಣಿಜ್ಯ ಶಾಸ್ತ್ರ ಓದುತ್ತಿರುವ ಅನ್ನಪೂರ್ಣ ಭೋಸಲೆ […]

ದೇಶಕ್ಕೆ ದೊಡ್ಡ ನಾಯಕರನ್ನು ಕೊಡುಗೆ ನೀಡಿದ್ದು ಹಿಂದುಳಿದ ವರ್ಗ- ಆ ನಾಯಕತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಕುಟ ಪ್ರಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಿಂದುಳಿದ ವರ್ಗ ದೇಶಕ್ಕೆ ಹಲವಾರು ದೊಡ್ಡ ಮತ್ತು ಉತ್ತಮ ನಾಯಕರನ್ನು ನೀಡಿದೆ. ಅಂಥ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ ಮೇರು ಪಂಕ್ತಿಯಲ್ಲಿದ್ದು ಮುಕುಟಪ್ರಾಯ ಎನಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕರ್ನಾಟಕದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯದ ಹಿಂದುಳಿದ ಸಚಿವರು, ಸಂಸದರು ಹಾಗೂ ಶಾಸಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಹಿಂದುಳಿದ ವರ್ಗದವರನ್ನು ಗುತ್ತಿಗೆ ತೆಗೆದುಕೊಂಡ ರೀತಿಯಲ್ಲಿ ಯಾವಾಗಲೂ ವರ್ತಿಸುತ್ತಿತ್ತು. ಆದರೆ ಪ್ರಧಾನಿ ನರೇಂದ್ರ […]