ಜಿಲ್ಲಾ ಕ್ರೀಡಾಂಗಣದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಹೊಸ ಕಾಮಗಾರಿ ಹಾಗೂ ಹಳೆಯ ದುರಸ್ತಿ ಕಾಮಗಾರಿಗಳನ್ನು ಆದ್ಯತೆಗೆ ಅನುಗುಣವಾಗಿ ಮತ್ತು ಅನುದಾನ ಲಭ್ಯತೆಯನ್ನು ಪರಿಗಣಿಸಿ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ.

ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು 400 ಮೀಟರ್ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ, ಸಂಪ್ ಟ್ಯಾಂಕ್, ಡ್ರೈನೇಜ್ ಕನೆಕ್ಷನ್, ವಾಲಿಬಾಲ್ ಸಿಂಥೆಟಿಕ್ ಮೈದಾನ, ಒಳಾಂಗಣ ಕ್ರೀಡಾಂಗಣ, ಕೃಷ್ಣ ಭಾಗ್ಯ ಜಲ ನಿಗಮದಿಂದ ಕೈಗೆತ್ತಿಕೊಂಡ ಕಾಂಕ್ರೀಟ್ ರಸ್ತೆ, ಪುಟ್ ಪಾತ್, ಹೊರಾಂಗಣ ಜಿಮ್ ಹಾಗೂ ಟೆನ್ನಿಸ್ ಕೋಟ್ ಮೈದಾನ ಒಳಾಂಗಣ ಕ್ರೀಡಾಂಗಣ ದುರಸ್ಥಿ ಮಾಡುವ ಕುರಿತು ಪರಿಶೀಲನೆ ನಡೆಸಿದರು.

ಈಗಾಗಲೇ ನಿರ್ಮಿಸಲಾಗಿರುವ ಮತ್ತು ಅಪೂರ್ಣವಾಗಿರುವ ಕಾಮಗಾರಿಗಳನ್ನು ಮಹಾನಗರ ಪಾಲಿಕೆಯಿಂದ ಹಾಗೂ ಕೃಷ್ಣ ಭಾಗ್ಯ ಜಲ ನಿಗಮದಿಂದ ಕೂಡಲೇ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಕ್ರೀಡಾಂಗಣದ ಕಂಪೌಂಡಿಗೆ ಹೊಂದಿಕೊಂಡಿರುವ ಮಹಾನಗರ ಪಾಲಿಕೆಯ ಮೇನ್ ಡ್ರೈನೇಜ್ ಹೂಳಿ ನಿಂದ ಕೂಡಿದ್ದು ಹೂಳನ್ನು ತೆಗೆಸಲು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಕ್ರೀಡಾಂಗಣದ ಎಲ್ಲ ತರಹದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಶೀಘ್ರವೇ ಸಾರ್ವಜನಿಕರಿಗೆ ಹಾಗೂ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

 

 

 

 

ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆಯ ಆಯುಕ್ತ ವಿಜಯ್ ಮೆಕ್ಕಳಕಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಜೆ. ಲೋಣಿ, ವ್ಹಾಲಿಬಾಲ್ ಸಂಘದ ಜಿಲ್ಲಾಧ್ಯಕ್ಷ ಬಿ. ಎಂ. ಕೋಕರೆ, ಬಸವರಾಜ ಗೊಳಸಂಗಿ ಸೇರಿದಂತೆ ನಾನಾ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌