ಬೆಂಗಳೂರು: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ನಡೆದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಹಿಂದೆ ನಿರ್ಧರಿಸಿದಂತೆ ಸರಕಾರ ಈ ವರ್ಷದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರಶಸ್ತಿ ನೀಡಲು ನಿರ್ಧರಿಸಿತ್ತು. ಅದರಂತೆ ನಿಗದಿ ಪಡಿಸಿದ ಮಾರ್ಗಸೂಚಿಯಂತೆ ಈಗ ಈ ಪ್ರಶಸ್ತಿಗೆ ಮಾಜಿ ಸಿಎಂ ಮತ್ತು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಶಾಸಕ ಬಿ. ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.