ಪ್ರತಿಯೊಂದು ಮಹಾನಗರಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ: ಬೆಳಗಾವಿಯ ಇ- ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸಿ ಅದು ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ- ಗ್ರಂಥಾಲಯ ತೆರೆಯಲು ಸರಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ದೇಶಭಕ್ತ ರವೀಂದ್ರ ಕೌಶಿಕ್ ಅವರ ಹೆಸರಿನಲ್ಲಿ ಇ- ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನ ಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ. ಜ್ಞಾನ ನೀಡುವುದು ಮತ್ತು ಪಡೆಯುವುದು […]
ಹದಗೆಟ್ಟ ರಸ್ತೆ ದುರಸ್ಥಿ ಮಾಡಲು ಜೆಸಿಬಿ, ರೋಡ್ ರೋಲರ್ ಜೊತೆ ಬಂದ ಕಾಂಗ್ರೆಸ್ಸಿಗರು- ಕಸಿವಿಸಿಗೊಂಡು ಸ್ಥಳಕ್ಕೆ ದೌಡಾಯಿಸಿ ಪ್ರತಿಭಟನೆ ತಡೆದ ಮಹಾನಗರ ಪಾಲಿಕೆ ಆಯುಕ್ತರು
ವಿಜಯಪುರ: ಹದಗೆಟ್ಟಿರುವ ರಸ್ತೆಗಳಿಂದ ಗುಮ್ಮಟ ನಗರಿಯ ಜನತೆ ಬೇಸತ್ತು ಹೋಗಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ಮಳೆ ಬಂದರಂತೂ ಈ ಗುಂಡಿಗಳು ಕಾಣಿಸದೇ ವಾಹನ ಸವಾರರು ಪರದಾಡುವಂತಾಗಿದೆ. ಹಲವಾರು ಬಾರಿ ಅಪಘಾತಗಳೂ ಸಂಭವಿಸಿವೆ. ಇದರಿಂದ ಬೇಸತ್ತ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುಮ್ಮಟ ನಗರಿ ವಿಜಯಪುರದಲ್ಲಿ ರಸ್ತೆ ದುರಸ್ಥಿಗೆ ಮುಂದಾದ ಘಟನೆ ನಡೆದಿದೆ. ಐತಿಹಾಸಿಕ ಗೋಳಗುಮ್ಮಟ ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಜೆಸಿಬಿ ಮತ್ತು ರೋಡ್ ರೋಲರ್ ಮತ್ತು ವೆಟ್ ಮಿಕ್ಸ್ […]
ಡಿಸೆಂಬರ್ ವೇಳೆಗೆ ಬೆಳಗಾವಿಗೆ ಸರಕಾರಿ ಕಚೇರಿಗಳ ಸ್ಥಳಾಂತರ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ: ಅ. 3 ರಿಂದ ಸಕ್ಕರೆ ನಿರ್ದೇಶನಾಲಯ ಬೆಳಗಾವಿಯಲ್ಲಿ ಕಾರ್ಯಾರಂಭ ಮಾಡಲಿದೆ. ಡಿಸೆಂಬರ್ ವೇಳೆಗೆ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುವುದು. ಆ ಸಂದರ್ಭದಲ್ಲಿ ಸಾಧ್ಯವಿರುವಷ್ಟು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019- 20 ನೇ ವರ್ಷದಲ್ಲಿ ಬೆಳಗಾವಿಯಲ್ಲಿ ಅತ್ಯಧಿಕ ಮಳೆಯಾಗಿ ಮನೆಗಳು ಹಾಗೂ ಬೆಳೆಗಳು ಹಾನಿಗೀಡಾಗಿವೆ ಆ ಸಂದರ್ಭದಲ್ಲಿ ಅಂದಿನ ಸಿಎಂ ಬಿ. ಎಸ್. ಯಡಿಯೂರಪ್ಪ ಹಲವು ಸೌಲಭ್ಯಗಳನ್ನು ಪ್ರಕಟಿಸಿದ್ದರು. ಒಟ್ಟು 44205 ಮನೆಗಳಿಗೆ […]
ಯು ಪಿ ಎಸ್ ಸಿ ಯಲ್ಲಿ 326ನೇ ಸ್ಥಾನ- ಯುವತಿಯನ್ನು ಅಭಿನಂದಿಸಿ ಸಂತಸಪಟ್ಟ ವಿವೇಕ ನಗರ ಬಡಾವಣೆ ಜನ
ವಿಜಯಪುರ: ಯು ಪಿ ಎಸ್ ಸಿ ಯಲ್ಲಿ ವಿಜಯಪುರ ಜಿಲ್ಲೆಯ ನೇತ್ರಾ ಮೇಟಿ ಎಂಬ ಯುವತಿ 326ನೇ ಸ್ಥಾನ ಪಡೆಯುವ ಮೂಲಕ ಯುವ ಜನತೆಯ ಕಣ್ಮಣಿಯಾಗಿ ಹೊರ ಹೊಮ್ಮಿದ್ದಾರೆ. ಈ ಯುವತಿಯ ಸಾಧನೆಯನ್ನು ಮೆಚ್ಚಿದ ವಿಜಯಪುರ ನಗರದ ವಿವೇಕ ನಗರ ಬಡಾವಣೆ ಜನರು ನಗರಸಭೆ ಮಾಜಿ ಸದಸ್ಯ ರವಿಕಾಂತ ಬಗಲಿ ನೇತೃತ್ವದಲ್ಲಿ ಯುವತಿಯನ್ನು ಸನ್ಮಾನಿಸಿ ಸಂಭ್ರಮ ಪಟ್ಟಿದ್ದಾರೆ. ಯುವತಿ ನೇತ್ರಾ ನಿವಾಸಕ್ಕೆ ತೆರಳಿದ ರವಿಕಾಂತ ಬಗಲಿ, ವಿವೇಕ ನಗರದ ಗಜಾನನ ತರುಣ ಮಂಡಳಿ, ಜೈ ಸಂತೋಷ […]
ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರ ಅಭಿನಂದನೆ ಸಮಾರಂಭ- ಸಿಎಂ ಬೊಮ್ಮಾಯಿ ಅವರಿಂದ ಸನ್ಮಾನ
ಬೆಳಗಾವಿ: ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿಯ 35 ಜನ ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಿತು. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ /ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 35 ಜನ ಸದಸ್ಯರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಚಿವರಾದ ಉಮೇಶ ಕತ್ತಿ, ಬೈರತಿ ಬಸವರಾಜ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟಿಲ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೆ. ಎಲ್. ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, […]
ಕನ್ನಡ ಆರ್ಥಿಕ ಭಾಷೆಯಾದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ- ಹೆಗ್ಗೋಡಿನ ಹಿರಿಯ ಚಿಂತಕ ಪ್ರಸನ್ನ
ವಿಜಯಪುರ: ಕನ್ನಡ ಆರ್ಥಿಕ ಭಾಷೆಯಾದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ನಿರ್ಲಕ್ಷಿತ ಕ್ಷೇತ್ರಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಪಡಿಸುವುದಯ ಸಧ್ಯದ ಅಗತ್ಯವಾಗಿದೆ ಎಂದು ಹೆಗ್ಗೋಡಿನ ಹಿರಿಯ ಚಿಂತಕ ಪ್ರಸನ್ನ ಹೇಳಿದರು. ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಚಿಂತನ ಸಾಂಸ್ಕೃತಿಕ ಬಳಗ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಗ್ರಾಮೋದ್ಯೋಗ ಮತ್ತು ಆರ್ಥಿಕತೆ ಕುರಿತು ಉಪನ್ಯಾಸ ನೀಡಿದರು. ಮಹಿಳೆಯರು ಸೇರಿದಂತೆ ನಿರ್ಲಕ್ಷಿತರಾಗಿರುವ ಮತ್ತು ಶೇ. […]
ಶ್ರವಣ ದೋಷ ಉಂಟಾಗದಂತೆ ಮಕ್ಕಳು, ಹಿರಿಯರು ಮುನ್ನೆಚ್ಚರಿಕೆ ವಹಿಸಬೇಕು- ಡಾ. ಆರ್. ಎಸ್. ಮುಧೋಳ
ವಿಜಯಪುರ: ಶ್ರವಣ ದೋಷವುಂಟಾಗದಂತೆ ಮಕ್ಕಳು, ವಯಸ್ಕರು ಹಾಗೂ ಹಿರಿಯ ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಮೂಢನಂಬಿಕೆಗಳಿಗೆ ಒಳಗಾಗದೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು ಎಂದು ಬಿ ಎಲ್ ಡಿ ಇ ಡಿಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು. ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಕಿವುಡುತನದ ಬಗ್ಗೆ ಚಿಕಿತ್ಸೆ ಜಾಗೃತಿ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು ಜಗತ್ತು ಕೋರೊನಾ ಮಹಾಮಾರಿಗೆ ನಲುಗಿದಾಗ ಸಂಸ್ಥೆಯ ಅಧ್ಯಕ್ಷರು ಮತ್ತು ಮಾಜಿ ಸಚಿವರಾದ ಎಂ. ಬಿ. ಪಾಟೀಲ ಅವರು […]
ಜನಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿರವಾಗ ಬಂದ್ ಕರೆ ಸರಿಯಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕೊರೊನಾ ಮತ್ತು ಲಾಕಡೌನ್ ನಂತರ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವಾಗ ಬಂದ್ ಆಚರಣೆ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಿಎಂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದರು. ರೈತ ಸಂಘಟನೆ ಭಾರತ ಬಂದ್ ಗೆ ಕರೆ ನೀಡಿದೆ. ಆದರೆ, ಈಗಷ್ಟೇ ಜನಜೀವನ ಕೊರೊನಾ ಮತ್ತು ಲಾಕಡೌನ್ ನಿಂದ ಸಹಜ ಸ್ಥಿತಿಗೆ ಮರಳುತ್ತಿದೆ. ವ್ಯಾಪಾರ ವಹಿವಾಟುಗಳು ಸಹಜವಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ಬಂದ್ ಗೆ ಕರೆ ನೀಡುವುದು ಸರಿಯಲ್ಲ ಎಂದು […]