ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರ ಅಭಿನಂದನೆ ಸಮಾರಂಭ- ಸಿಎಂ ಬೊಮ್ಮಾಯಿ ಅವರಿಂದ ಸನ್ಮಾನ

ಬೆಳಗಾವಿ: ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿಯ 35 ಜನ ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ /ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 35 ಜನ ಸದಸ್ಯರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಚಿವರಾದ ಉಮೇಶ ಕತ್ತಿ, ಬೈರತಿ ಬಸವರಾಜ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟಿಲ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೆ. ಎಲ್.‌ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.‌ಪ್ರಭಾಕರ ಕೋರೆ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಆನಂದ ಮಾಮನಿ, ದುರ್ಯೋಧನ ಐಹೊಳೆ, ವಿಧಾನ ಒರಿಷತ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಬೆಳಗಾವಿ ಜಿಲ್ಲೆಯ ಜನ‌ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌